ಚಿಕ್ಕಮಗಳೂರು: ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಸೇರಿ 15 ಜನರಿಗೆ ಗಡಿಪಾರು ನೋಟಿಸ್
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮಹತ್ವದ ಕ್ರಮವಾಗಿ, ಬಿಜೆಪಿ ಹಾಗೂ ವಿವಿಧ ಸಮುದಾಯ ಸಂಘಟನೆಗಳಿಗೆ ಸೇರಿದ ಒಟ್ಟು 15 ಮಂದಿಗೆ ಗಡಿಪಾರು ನೋಟಿಸ್ ಜಾರಿ ಮಾಡಲಾಗಿದೆ.
ಪೊಲೀಸ್ ಕಾಯ್ದೆ 1963ರ ಕಲಂ 58ರ ಅಡಿಯಲ್ಲಿ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸಂಬಂಧಪಟ್ಟವರಿಗೆ ಸೂಚಿಸಲಾಗಿದೆ. ಈ ಪಟ್ಟಿಯಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಕೋಟ್ಯಾನ್ ಹಾಗೂ ಬಜರಂಗದಳ ಹಾಸನ ವಿಭಾಗದ ಸಂಯೋಜಕ ಶ್ಯಾಮ್ ವಿ ಗೌಡ ಸೇರಿದಂತೆ ಹಲವು ಪ್ರಮುಖರ ಹೆಸರುಗಳು ಸೇರಿವೆ.
ಪ್ರಕಾರ, ಪೊಲೀಸ್ ಇಲಾಖೆಯ ಶಿಫಾರಸ್ಸಿನ ಸಂತೋಷ್ ಕೋಟ್ಯಾನ್ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಸುಮಾರು 14 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ, ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಇರುವುದಾಗಿ ಪರಿಗಣಿಸಿ ಗಡಿಪಾರು ಕ್ರಮಕ್ಕೆ ಮನವಿ ಮಾಡಲಾಗಿದೆ.
ಒಟ್ಟಾರೆ 15 ಮಂದಿಯಲ್ಲಿ 10 ಮಂದಿ ಮುಸ್ಲಿಂ ಸಮುದಾಯದವರು ಹಾಗೂ 5 ಮಂದಿ ಹಿಂದೂ ಸಮುದಾಯದವರಾಗಿದ್ದು,




