ಬೆಳ್ತಂಗಡಿ | ಗೆಳೆಯರೊಂದಿಗೆ ಬಂದಿದ್ದ ಅಪ್ರಾಪ್ತ ಬಾಲಕನ ಮೇಲೆ ಗುಂಪಿನಿಂದ ಹಲ್ಲೆ: FIR ದಾಖಲು
ಬೆಳ್ತಂಗಡಿ: ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ಗೆಳೆಯರೊಂದಿಗೆ ಬಂದಿದ್ದ ಅಪ್ರಾಪ್ತ ಬಾಲಕನ ಮೇಲೆ ಗುಂಪೊಂದು ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.
ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ವಿದ್ಯಾಸಂಸ್ಥೆಯಲ್ಲಿ ಕಲಿಯುತ್ತಿರುವ ಅಪ್ರಾಪ್ತ ಪ್ರಾಯದ (17 ವರ್ಷ)ಬಾಲಕ ಮಾರ್ಚ್ 11ರಂದು ಸಂಜೆ, ತನ್ನ ಶಾಲಾ ಸ್ನೇಹಿತರೊಂದಿಗೆ ಜಾತ್ರೆಗೆ ತೆರಳಿರುತ್ತಾನೆ. ಈ ವೇಳೆ ಜಾತ್ರಾ ಸ್ಥಳದಲ್ಲಿದ್ದ ಕೆಲವರು, ತಮ್ಮ ಧರ್ಮದ ಹುಡುಗಿಯರೊಂದಿಗೆ ಅನ್ಯ ಧರ್ಮದ ಬಾಲಕನು ಜಾತ್ರೆಗೆ ಬಂದಿರುವುದಾಗಿ ಆರೋಪಿಸಿ, ಬಾಲಕನಿಗೆ ಹಲ್ಲೆ ನಡೆಸಿ ನಿಂದಿಸಿರುತ್ತಾರೆ ಹಾಗೂ ಸದ್ರಿ ಬಾಲಕನನ್ನು ಅಲ್ಲಿಂದ ಬೈಕಿನಲ್ಲಿ ದೂರ ಕರೆತಂದು ಹಲ್ಲೆ ನಡೆಸಿ, ಬಾಲಕನಿಂದ ತಾನೇ ಜಾತ್ರಾ ಸ್ಥಳದಲ್ಲಿ ತಪ್ಪು ಮಾಡಿರುವುದಾಗಿ ವಿಡಿಯೋ ಹೇಳಿಕೆ ದಾಖಲಿಸಿಕೊಂಡು ಆತನನ್ನು ಕಳುಹಿಸಿರುತ್ತಾರೆ. ಈ ಘಟನೆಯಿಂದ ಬಾಲಕನು ಕೆಲದಿನಗಳಿಂದ ಭಯಭೀತನಾಗಿರುತ್ತಾನೆ ಎಂಬುದಾಗಿ ಬಾಲಕನ ತಂದೆ ನಿನ್ನೆ ದೂರು ನೀಡಿದ್ದಾರೆ
ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ ಕ್ರ 30/2026, ថ໐: 137(2), 115(2), 351(2), 352, 353(2) ಜೊತೆಗೆ 190 ಬಿಎನ್ ಎಸ್ 2023 ರಂತೆ ↑ ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ




