March 19, 2026

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ಪೋಸ್ಟ್: ಬೆಳ್ತಂಗಡಿ ಮೂಲದ ಯುವತಿ ಅರೆಸ್ಟ್

0
first-information-report

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ಉಂಟುಮಾಡುವ ರೀತಿಯ ಪೋಸ್ಟ್‌ಗಳನ್ನು ಹಂಚಿಕೊಂಡ ಆರೋಪದಲ್ಲಿ ಬೆಳ್ತಂಗಡಿ ತಾಲೂಕಿನ ಯುವತಿಯನ್ನು ನಗರ ಪೊಲೀಸರು ಬಂಧಿಸಿದ್ದಾರೆ.


2025ರಲ್ಲಿ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ವಿಷಯಗಳನ್ನು ಹಂಚಿಕೊಂಡ ಕುರಿತು ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (ಬಿ.ಎನ್‌.ಎಸ್.)–2023ರ ಕಲಂ 353(1), 353(2), 61(2) ಹಾಗೂ 55ರಡಿ ಪ್ರಕರಣ ದಾಖಲಾಗಿತ್ತು.


ತನಿಖೆಯಲ್ಲಿ, ‘Terrorism has religion and so called Terrorists too. Its Islam’ ಎಂಬುದನ್ನು ಸೇರಿದಂತೆ ಕೆಲವು ವಿವಾದಾತ್ಮಕ ಪೋಸ್ಟ್‌ಗಳನ್ನು ಆರೋಪಿತೆ ಹಂಚಿಕೊಂಡಿರುವುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!