ಪುತ್ತೂರು: ಭಾರತೀಯ ಕುಸ್ತಿ ಸಂಘದ ಜಂಟಿ ಕಾರ್ಯದರ್ಶಿ, ಜಯ ಕರ್ನಾಟಕ ಜನಪರ ವೇದಿಕೆಯ ಸಂಸ್ಥಾಪಕರು ಉದ್ಯಮಿ ಬಿ.ಗುಣರಂಜನ್ ಶೆಟ್ಟಿಯವರ ಹುಟ್ಟುಹಬ್ಬ ಆಚರಣೆ: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ
ಪುತ್ತೂರು: ಜಯ ಕರ್ನಾಟಕ
ಜನಪರ ವೇದಿಕೆಯ
ಸಂಸ್ಥಾಪಕರೂ ಭಾರತೀಯ ಕುಸ್ತಿ ಸಂಘದ ಜಂಟಿ ಕಾರ್ಯದರ್ಶಿಗಳೂ ಅಖಿಲ ಭಾರತ ಬೀಚ್ ರೆಸ್ಲಿಂಗ್ ಅಸೋಸಿಯೇಷನ್ ಅಧ್ಯಕ್ಷರೂ ದಕ್ಷಿಣ ಭಾರತ ಕುಸ್ತಿ ಸಂಘದ ಉಪಾಧ್ಯಕ್ಷರೂ ಕರ್ನಾಟಕ ರಾಜ್ಯ ಕುಸ್ತಿ ಸಂಘದ ಅಧ್ಯಕ್ಷರೂ ಬೆಳ್ಳಿಪ್ಪಾಡಿ ಫ್ಯಾಮಿಲಿ ಟ್ರಸ್ಟ್ ನ ಉಪಾಧ್ಯಕ್ಷರೂ ಬೆಳ್ಳಿಪ್ಪಾಡಿ ಶ್ರೀ ಸಕಲೇಶ್ವರ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ ಸಮಿತಿ ಅಧ್ಯಕ್ಷರೂ ಉದ್ಯಮಿಗಳೂ ಆಗಿರುವ ಪುತ್ತೂರು ಪ್ರತಿಷ್ಠಿತ ಬೆಳ್ಳಿಪ್ಪಾಡಿ ಮನೆತನದ ಉರಮಾಲು ಗುತ್ತು ಮೂಲದವರಾಗಿರುವ, ದಕ್ಷಿಣ ಭಾರತದ ಖ್ಯಾತ ನಟಿ ಅನುಷ್ಕಾ ಶೆಟ್ಟಿ ಅವರ ಸಹೋದರ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ ಅವರ ಹುಟ್ಟು ಹಬ್ಬದ ಪ್ರಯುಕ್ತ ಮಾ.20ರಂದು ಬೆಳಿಗ್ಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಸಂಘಟನೆಯ ಪದಾಧಿಕಾರಿಗಳಿಂದ ವಿಶೇಷ ಪ್ರಾರ್ಥನೆ ಮತ್ತು ವಿಶೇಷ ಪೂಜೆ ನಡೆಯಿತು.
ದೇವಾಲಯದ ಅರ್ಚಕ ಶಂಕರನಾರಾಯಣ ಭಟ್ ಪ್ರಾರ್ಥನೆ ನೆರವೇರಿಸಿ ಶ್ರೀ ದೇವರ ಗಂಧ ಪ್ರಸಾದ ನೀಡಿ ಶುಭ ಹಾರೈಸಿದರು. ಸಂಜೆ ಬೀರಮಲೆ ಬೆಟ್ಟದಲ್ಲಿರುವ ವಿಶೇಷ ಚೇತನರ ನಿಲಯ ‘ಪ್ರಜ್ಞಾ ಆಶ್ರಮ’ದಲ್ಲಿ ಮಕ್ಕಳ ಜೊತೆಗೆ ದೀಪ ಬೆಳಗಿಸುವ ಮೂಲಕ ಗುಣರಂಜನ್ ಶೆಟ್ಟಿಯವರ ಹುಟ್ಟುಹಬ್ಬ ಆಚರಣೆ ಮಾಡಲಾಯಿತು.ಕೇಕ್ ಕತ್ತರಿಸಿ ಸಿಹಿ ಹಾಗೂ ಹಣ್ಣು ಹಂಪಲು ಹಂಚಿ ಸಂಭ್ರಮಿಸಲಾಯಿತು.
ಒಳಮೊಗ್ರು ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ನಿಮಿತಾ ನವೀನ್ ರೈ ಅವರು ದೀಪ ಪ್ರಜ್ವಲನೆ ಮಾಡಿ ಆಶ್ರಮದ ಮಕ್ಕಳು ಕೇಕ್ ಕತ್ತರಿಸಿ ಹುಟ್ಟುಹಬ್ಬದ ಸಂಭ್ರಮಕ್ಕೆ ಚಾಲನೆ ನೀಡಿದರು.
ಜಯ ಕರ್ನಾಟಕ ಜನಪರ ವೇದಿಕೆಯ ಜಿಲ್ಲಾಧ್ಯಕ್ಷರಾದ ಉದ್ಯಮಿ ಕಾರ್ತಿಕ್ ರೈ ಮಾತನಾಡಿ ಜಯ ಕರ್ನಾಟಕ ಜನಪರ ಸಂಘಟನೆಯ ಸ್ಥಾಪಕಾಧ್ಯಕ್ಷರಾದ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿಯವರ ಹುಟ್ಟು ಹಬ್ಬವನ್ನು ವಿಶೇಷ ರೀತಿಯಲ್ಲಿ ಆಚರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ ಮಹಾಲಿಂಗೇಶ್ವರ ದೇವರ ನಡೆಯಲ್ಲಿ ವಿಶೇಷ ಪ್ರಾರ್ಥನೆ, ಪೂಜೆ ನಡೆಸಲಾಗಿದೆ. ಇದೀಗ ವಿಶೇಷ ಚೇತನ ಮಕ್ಕಳಿಗೆ ಸಿಹಿ, ಹಣ್ಣು ಹಂಪಲು ವಿತರಣೆ ಜೊತೆಗೆ ಒಂದು ದಿನದ ಸಿಹಿ ಭೋಜನ ವ್ಯವಸ್ಥೆ ಮಾಡುವ ಮೂಲಕ ತುಂಬಾ ಅರ್ಥಪೂರ್ಣವಾಗಿ ಕಾರ್ಯಕ್ರಮ ಆಯೋಜನೆ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಅತ್ಯುತ್ತಮ ರೀತಿಯ ಕಾರ್ಯಕ್ರಮ ಒದಗಿ ಬರಲು ಶ್ರೀ ದೇವರು ಗುಣಣ್ಣನಿಗೆ ಆಯುರಾರೋಗ್ಯವನ್ನು ಕರುಣಿಸಲಿ ಎಂದು ನಾವೆಲ್ಲರೂ ಪ್ರಾರ್ಥಿಸೋಣ ಎಂದು ಹೇಳಿದರು.
ಪ್ರಜ್ಞಾ ಆಶ್ರಮ ಕೇಂದ್ರದ ಮುಖ್ಯಸ್ಥ ಅಣ್ಣಪ್ಪ ಅವರು ಮಾತನಾಡಿ ತುಂಬಾ ಒಳ್ಳೆಯ ರೀತಿಯ ಕಾರ್ಯಕ್ರಮ ಆಯೋಜಿಸಿದ್ದೀರಿ. ಎಲ್ಲರಿಗೂ ಭಗವಂತನ ಆಶೀರ್ವಾದ ಸದಾ ಇರಲಿ. ಮುಂದೆಯೂ ಇಂತಹ ಕಾರ್ಯ ಜರಗಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಪ್ರಮುಖರಾದ
ದಯಾನಂದ ಶೆಟ್ಟಿ ಉಜಿರೆಮಾರು, ಉದ್ಯಮಿ ಸಂತೋಷ್ ಕುಮಾರ್ ರೈ ಕೈಕಾರ, ಪ್ರಕಾಶ್ ಶೆಟ್ಟಿಮಜಲು, ಇಡ್ಕಿದು ಗ್ರಾಮ ಪಂಚಾಯತ್ ಮಾಜಿ ಸದಸ್ಯ ತಿಲಕ್ ರಾಜ್ ಶೆಟ್ಟಿ, ನವೀನ್ ರೈ ಕೈಕಾರ, ತುಳಸಿದಾಸ್ ಶೆಟ್ಟಿ ವಿಟ್ಲ, ಪ್ರಭಾಕರ್ ಅಮೈ, ರಾಜೇಶ್ ನಾಯಕ್ ಕುಂಡಡ್ಕ, ಪವನ್ ಮುಂಡೂರು, ಹರೀಶ್ ಸಂಪ್ಯ ಸಹಿತ ಸಂಘಟನೆಯ ವಿವಿಧ ಪದಾಧಿಕಾರಿಗಳು ಹಾಜರಿದ್ದರು. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಮನ್ಮಥ ಶೆಟ್ಟಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು.
ಜಯಕರ್ನಾಟಕ ಜನಪರ ವೇದಿಕೆಯ ರಾಜ್ಯಾಧ್ಯಕ್ಷ ಜೆ. ಶ್ರೀನಿವಾಸ್ ಮತ್ತು ರಾಜ್ಯ ಸಂಚಾಲಕ ರಾಮದಾಸ್ ಶೆಟ್ಟಿ ವಿಟ್ಲ ಅವರ ಮಾರ್ಗದರ್ಶನದಲ್ಲಿ ಜಿಲ್ಲಾಧ್ಯಕ್ಷ ಕಾರ್ತಿಕ್ ರೈ ಕಾರ್ಯಕ್ರಮ ಆಯೋಜನೆಯ ನೇತೃತ್ವ ವಹಿಸಿಕೊಂಡಿದ್ದರು.
ಜಯ ಕರ್ನಾಟಕ ಜನಪರ ವೇದಿಕೆ ಹಾಗೂ ಕರ್ನಾಟಕ ರಾಜ್ಯ ಕುಸ್ತಿ ಸಂಘಟನೆಯ ವತಿಯಿಂದ ಎಲ್ಲಾ ಜಿಲ್ಲೆಗಳಲ್ಲಿ ಪದಾಧಿಕಾರಿಗಳು ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿದರು.
ಕರ್ನಾಟಕ ರಾಜ್ಯದಾದ್ಯಂತ ಬೆಂಗಳೂರಿನ ಪ್ರತೀ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಹುಟ್ಟುಹಬ್ಬದ ಸಂಭ್ರಮಾಚರಣೆಯನ್ನು ವಿಶೇಷ ರೀತಿಯಲ್ಲಿ ಆಚರಿಸಲಾಯಿತು. ಅಲ್ಲದೆ ರಾಜ್ಯದಲ್ಲಿ ದ ಕ ಉಡುಪಿ ಜಿಲ್ಲೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬಹಳ ಸಂಭ್ರಮದಿಂದ ಆಚರಿಸಲಾಯಿತು.




