ವಿಟ್ಲ: ಕಾರು-ಬೈಕ್ ನಡುವೆ ಭೀಕರ ಅಪಘಾತ: ಬೈಕ್ ನಲ್ಲಿದ್ದ ಇಬ್ಬರು ಗಂಭೀರ
ವಿಟ್ಲ: ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಬೈಕ್ ನಲ್ಲಿದ್ದ ಇಬ್ಬರು ಸವಾರರು ಗಂಭೀರ ಗಾಯಗೊಂಡ ಘಟನೆ ವಿಟ್ಲ-ಮಂಗಳೂರು ರಸ್ತೆಯ ಬೊಬ್ಬೆಕೇರಿ ಶಾಂತಿನಗರ ಎಂಬಲ್ಲಿ ನಡೆದಿದೆ.

ವಿಟ್ಲ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಮತ್ತು ಮಂಗಳೂರು ಕಡೆಯಿಂದ ವಿಟ್ಲ ಕಡೆಗೆ ಬರುತ್ತಿದ್ದ ಬೈಕ್ ನಡುವೆ ಈ ಅಪಘಾತ ಸಂಭವಿಸಿದೆ.
ಬೈಕ್ ನಲ್ಲಿದ್ದ ವೀರಕಂಬ ಮೂಲದವರು ಎನ್ನಲಾದ ಸವಾರ ಮತ್ತು ಸಹಸವಾರ ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಕಾರು ವಿಟ್ಲದ ಮೇಗಿನಪೇಟೆಯ ನಿವಾಸಿಯದ್ದು, ಹೇಳಲಾಗಿದ್ದು, ಹೊರ ರಾಜ್ಯದವರು ಚಲಾಯಿಸುತ್ತಿದ್ದರು ಎನ್ನಲಾಗಿದೆ.




