July 2, 2026

ಬೆಕ್ಕನ್ನು ಸಾಕೋದು ಬೇಡ ಎಂದಿದ್ದಕ್ಕೆ ಮನನೊಂದ ವೈದ್ಯೆ  ನೇಣು ಬಿಗಿದು ಆತ್ಮಹತ್ಯೆ

0
image_editor_output_image1896715835-1774194050761.jpg

ಹೈದರಾಬಾದ್‌: ಕುಟುಂಬಸ್ಥರು ಬೆಕ್ಕನ್ನು (Cat) ಸಾಕೋದು ಬೇಡ ಎಂದಿದ್ದಕ್ಕೆ ಮನನೊಂದು 23 ವರ್ಷದ ವೈದ್ಯೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ.

ಹೈದರಾಬಾದ್‌ನ ಅಲ್ವಾಲ್ ನಿವಾಸಿಯಾಗಿರುವ ವೈದ್ಯೆ ಟಿ ಪ್ರಿನ್ಸಿ ಅಲಿಯಾಸ್ ಶ್ರೇಷ್ಠ ಶುಕ್ರವಾರ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರು ಎಂಬಿಬಿಎಸ್ ನಂತರ ಉನ್ನತ ಅಧ್ಯಯನಕ್ಕೆ ತಯಾರಿ ನಡೆಸುತ್ತಿದ್ದರು. ಕಳೆದ ಮೂರು ತಿಂಗಳಿನಿಂದ ಅವರು ಬೆಕ್ಕನ್ನು ಸಾಕುತ್ತಿದ್ದರು. ಆದರೆ, ಆಕೆಯ ಪೋಷಕರು ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಇದೇ ಕಾರಣಕ್ಕೆ ಆಕೆ ಜಗಳವಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!