ವರದಕ್ಷಿಣೆಗಾಗಿ ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನು ಹತ್ಯೆ ಮಾಡಿದ ಪತಿ
ಚಂಡೀಗಢ: ವರದಕ್ಷಿಣೆಗಾಗಿ ನಾಲ್ಕು ತಿಂಗಳ ಹಿಂದಷ್ಟೇ ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನು ಪತಿ ಹತ್ಯೆ ಮಾಡಿರುವ ಘಟನೆ ಹರಿಯಾಣದ ಗುರುಗ್ರಾಮ್‌ನಲ್ಲಿ ನಡೆದಿದೆ.
ಕಾಜಲ್ ಹತ್ಯೆಯಾದ ಪತ್ನಿ. ರೇಡಿಯಾಲಜಿಸ್ಟ್ ಆಗಿರುವ ಅರುಣ್ ಶರ್ಮಾ ಮತ್ತು ನರ್ಸ್ ಆಗಿದ್ದ ಕಾಜಲ್ ಗುರುಗ್ರಾಮ್‌ನ ನರ್ಸಿಂಗ್ ಹೋಂನಲ್ಲಿ ಒಟ್ಟಿಗೆ ಕೆಲಸ ಮಾಡುತ್ತಿದ್ದರು. ಅವರಿಬ್ಬರ ಸ್ನೇಹ ಪ್ರೀತಿಯಾಗಿ ಮಾರ್ಪಟ್ಟು ಕಳೆದ ನವೆಂಬರ್‌ನಲ್ಲಿ ಮದುವೆಯಾಗಿದ್ದರು. ಬಳಿಕ ಪತಿ-ಪತ್ನಿಯ ನಡುವೆ ಕ್ಷುಲ್ಲಕ ವಿಷಯಕ್ಕೆ ಆಗಾಗ ಜಗಳ ನಡೆಯುತ್ತಿತ್ತು. ಅಲ್ಲದೇ ವರದಕ್ಷಿಣೆ ಕಿರುಕುಳ ಕೊಟ್ಟು ಆಕೆಯ ಮೇಲೆ ಅರುಣ್ ಹಲ್ಲೆ ನಡೆಸುತ್ತಿದ್ದ ಎಂದು ಕಾಜಲ್ ಸಹೋದರ ಆರೋಪಿಸಿದ್ದಾರೆ.




