ಹೆಜಮಾಡಿ ಟೋಲ್ ಪ್ಲಾಝ ಸಮೀಪವಿರುವ ಟೈರ್ ಪಂಕ್ಚರ್ ಅಂಗಡಿಗೆ ಬೆಂಕಿ
ಉಡುಪಿ: ರಾಷ್ಟ್ರೀಯ ಹೆದ್ದಾರಿ 66 ರ ಹೆಜಮಾಡಿ ಟೋಲ್ ಪ್ಲಾಜಾ ಸಮೀಪವಿರುವ ಟೈರ್ ಪಂಕ್ಚರ್ ದುರಸ್ತಿ ಅಂಗಡಿಯೊಂದು ಭಾನುವಾರ ಮಧ್ಯಾಹ್ನ ಸಂಭವಿಸಿದ ಭೀಕರ ಬೆಂಕಿಗೆ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹತ್ತಿರದ ಎಲೆಕ್ಟ್ರಿಕ್ ಟ್ರಾನ್ಸ್‌ಫಾರ್ಮರ್‌ನಿಂದ ಹೊರಬಂದ ಕಿಡಿಗಳು ಒಣ ಹುಲ್ಲಿಗೆ ತಗುಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ. ಈ ಬೆಂಕಿಯು ಕ್ಷಣಾರ್ಧದಲ್ಲಿ ಹರಡಿ, ಬಿಹಾರ ಮೂಲದ ಸೈಫುಲ್ಲಾ ಎಂಬುವವರಿಗೆ ಸೇರಿದ ಅಂಗಡಿಗೆ ತಗುಲಿದೆ. ಈ ದುರ್ಘಟನೆಯಿಂದ ಸುಮಾರು 4 ರಿಂದ 5 ಲಕ್ಷ ರೂಪಾಯಿ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.




