ಲ್ಯಾಂಡಿಂಗ್ ವೇಳೆ ಅಗ್ನಿಶಾಮಕ ವಾಹನಕ್ಕೆ ಢಿಕ್ಕಿ ಹೊಡೆದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ
ನ್ಯೂಯಾರ್ಕ್: ನ್ಯೂಯಾರ್ಕ್‌ನ ಲಾಗ್ವಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ ಲ್ಯಾಂಡಿಂಗ್ ವೇಳೆ ಅಗ್ನಿಶಾಮಕ ವಾಹನವೊಂದಕ್ಕೆ ಢಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ ಫೈಟ್ ಟ್ಯಾಕಿಂಗ್ ವೆಬೈಟ್ FlightRadar24 ಪ್ರಕಾರ, ಈ ವಿಮಾನವು ಮಾಂಟ್ರಿಯಲ್‌ನಿಂದ ನ್ಯೂಯಾರ್ಕ್‌ಗೆ ಬರುತ್ತಿದ್ದಾಗ ಲ್ಯಾಂಡಿಂಗ್ ವೇಳೆ ವಿಮಾನ ನಿಲ್ದಾಣದಲ್ಲಿದ್ದ ವಾಹನವೊಂದಕ್ಕೆ ಢಿಕ್ಕಿ ಹೊಡೆದಿದೆ.
ಘಟನೆ ಬಳಿಕ, ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ವಿಮಾನ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಯುಎಸ್ ಫೆಡರಲ್ ಏವಿಯೇಷನ್ ಅಡ್ಮಿನಿಸ್ಟೇಷನ್ ತಿಳಿಸಿದೆ.




