March 25, 2026

ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ; ಮೂರನೇ ಮತ್ತು ನಾಲ್ಕನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು

0
IMG-20260325-WA0001.jpg

ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಮೂರನೇ ಮತ್ತು ನಾಲ್ಕನೇ ಆರೋಪಿಗಳಿಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಪ್ರಕರಣದ 3ನೇ ಆರೋಪಿ ಮಂಜುನಾಥ್ ಶೆಣೈ ಮತ್ತು 4ನೇ ಆರೋಪಿ ಕೇಶವ ಪರವಾಗಿ ಹಿರಿಯ ವಕೀಲ ನರಸಿಂಹ ಪ್ರಸಾದ್‌ ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು. ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶರಾದ ಸರಿತಾ ಡಿ. ಅವರು ಇಬ್ಬರಿಗೂ ಜಾಮೀನು ನೀಡಿ ಆದೇಶಿಸಿದ್ದಾರೆ

ಷರತ್ತುಗಳು : ತಲಾ 1 ಲಕ್ಷ ರೂಪಾಯಿ ಮೊತ್ತದ ವೈಯಕ್ತಿಕ ಬಾಂಡ್‌ ಸಲ್ಲಿಸುವುದು.ಪ್ರಕರಣದ ಸಾಕ್ಷಿಗಳಿಗೆ ಯಾವುದೇ ರೀತಿಯ ಬೆದರಿಕೆ ಹಾಕಬಾರದು ಅಥವಾ ಸಾಕ್ಷ್ಯನಾಶಕ್ಕೆ ಯತ್ನಿಸಬಾರದು.
ವಿಚಾರಣಾ ಸಮಯದಲ್ಲಿ ತಪ್ಪದೇ ನ್ಯಾಯಾಲಯಕ್ಕೆ ಹಾಜರಾಗಬೇಕು.

Leave a Reply

Your email address will not be published. Required fields are marked *

error: Content is protected !!