March 25, 2026

ಚಿಕ್ಕಮಗಳೂರು: ನಾಗಾಲ್ಯಾಂಡ್ ಮೂಲದ ಯುವತಿ ಅನುಮಾನಾಸ್ಪದ ಆತ್ಮಹತ್ಯೆ

0
image_editor_output_image1438301129-1774434423893.jpg

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ನಾಗಾಲ್ಯಾಂಡ್ ಮೂಲದ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಅರವಿಂದ ನಗರ ಬಡಾವಣೆಯಲ್ಲಿ ನಡೆದಿದೆ.

ಮೃತ ಯುವತಿಯನ್ನು ಲಿನ್ಸುಲಾ (22) ಎಂದು ಗುರುತಿಸಲಾಗಿದೆ. ಯುವತಿ ರೆಸಾರ್ಟ್ ಒಂದರಲ್ಲಿ ಕೆಲಸ ಮಾಡುತ್ತಿದ್ದಳು. ಎರಡು ದಿನದ ಹಿಂದೆ ಕಿವಿಶೆ ಕಿನಿಮಿ ಎಂಬವರ ಜೊತೆ ಅರ್ಧ ಗಂಟೆ ಮಾತನಾಡಿದ್ದಳು ಎಂದು ತಿಳಿದು ಬಂದಿದೆ. ಯುವತಿ ಸಾವಿಗೂ ಮುನ್ನ ರಾಜೇಶ್ ಹಾಗೂ ತೇಜಸ್‌ ಎಂಬವರ ಹೆಸರನ್ನು ಡೈರಿಯಲ್ಲಿ ಬರೆದಿಟ್ಟಿದ್ದಾಳೆ.

ಲಿನ್ಸುಲಾಳಿಗೆ ರಾಜೇಶ್ ಹಾಗೂ ತೇಜಸ್ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದರು ಎಂದು ಲಶಿಲಾ ಇಂಚುಗರ್‌ ಎಂಬವರು ಬಸವನಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!