March 25, 2026

ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ ಸಾವು

0
image_editor_output_image-346567841-1774434694454.jpg

ಮಂಡ್ಯ: ಈಜಾಡಲು ಹೋಗಿ ಕೃಷಿ ಹೊಂಡದಲ್ಲಿ ಮುಳುಗಿ ಬಾಲಕನೊಬ್ಬ ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.

ಮಳವಳ್ಳಿ ತಾಲೂಕಿನ ದಳವಾಯಿ ಕೋಡಿಹಳ್ಳಿ ಗ್ರಾಮದ ಶಿವಣ್ಣ ಅವರ ಪುತ್ರ ಪೃಥ್ವಿನ್ (15) ಮೃತ ಬಾಲಕ. ದಳವಾಯಿ ಕೋಡಿಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಬಾಲಕ ಶಾಲೆಗೆ ರಜೆ ಇದ್ದ ಕಾರಣ ತನ್ನ 4 ಮಂದಿ ಸ್ನೇಹಿತರೊಂದಿಗೆ ಭಾನುವಾರ ಮಧ್ಯಾಹ್ನ ಈಜಾಡಲು ತೆರಳಿದ್ದಾಗ ಈ ಘಟನೆ ನಡೆದಿದೆ.

Leave a Reply

Your email address will not be published. Required fields are marked *

error: Content is protected !!