March 28, 2026

ಮಹಿಳೆಯ ಮೇಲೆ ಅತ್ಯಾಚಾರ: ಸ್ವಯಂ ಘೋಷಿತ ದೇವಮಾನವನ ಬಂಧನ

0
image_editor_output_image1432043233-1774687421669.jpg

ಮುಂಬೈ: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಸ್ವಯಂ ಘೋಷಿತ ದೇವಮಾನವನೊಬ್ಬ ತಾನು ಶಿವನ ಅವತಾರ ಎಂದು ಹೇಳಿಕೊಂಡು 35 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿಯನ್ನು ಋಷಿಕೇಶ್ ವೈದ್ಯ (40) ಎಂದು ಗುರುತಿಸಲಾಗಿದೆ. ಪುಣೆ ನಿವಾಸಿಯಾಗಿರುವ ಮಹಿಳೆ 2023 ರಲ್ಲಿ ಫೇಸ್‌ಬುಕ್ ಮೂಲಕ ಆರೋಪಿಗೆ ಪರಿಚಯವಾಗಿದ್ದಳು.

ಆ ವರ್ಷ ಡಿಸೆಂಬರ್‌ನಲ್ಲಿ, ಆರೋಪಿಯು ಮಹಿಳೆಯನ್ನು ಭೇಟಿಯಾಗಲು ಪುಣೆಗೆ ಭೇಟಿ ನೀಡಿದ್ದ. ಬಳಿಕ ಪುಣೆಯ ಮಂಜರಿ ಪ್ರದೇಶದ ಲಾಡ್ಜ್‌ಗೆ ಕರೆದೊಯ್ದು, ಅಲ್ಲಿ ಅತ್ಯಾಚಾರವೆಸಗಿದ್ದ. ಇದಕ್ಕೂ ಮುನ್ನ ಮಂಪರು ಬರುವ ಔಷಧ ನೀಡಿದ್ದ. ದೌರ್ಜನ್ಯ ಎಸಗುವ ಛಾಯಾಚಿತ್ರಗಳನ್ನು ತೆಗೆದಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾಳೆ. ಇದನ್ನೂ ಓದಿ: ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!

ಆರೋಪಿ ಫೋಟೋಗಳನ್ನು ಇಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿದ್ದಾನೆ. ಕಳೆದ ವರ್ಷ ಮೇ ತಿಂಗಳಲ್ಲಿ, ವಸೈನಲ್ಲಿರುವ ಹೋಟೆಲ್‌ಗೆ ಕರೆದು ಮತ್ತೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾಳೆ.

Leave a Reply

Your email address will not be published. Required fields are marked *

error: Content is protected !!