April 3, 2026

ವಿಟ್ಲ: ಯುವಕ ನೇಣು ಬಿಗಿದು ಆತ್ಮಹತ್ಯೆ

0
image_editor_output_image663702342-1775192679102.jpg

ವಿಟ್ಲ: ಇಲ್ಲಿನ ಸಮೀಪದ ನೆಕ್ಕರೆಕಾಡು ಎಂಬಲ್ಲಿ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ವರದಿಯಾಗಿದೆ.

ನೆಕ್ಕರೆಕಾಡು ನಿವಾಸಿ ರಮೇಶ್ (38) ಮೃತಪಟ್ಟ ವ್ಯಕ್ತಿ. ಇವರು ವೃತ್ತಿಯಲ್ಲಿ ಜೆಸಿಬಿ ಆಪರೇಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಅವಿವಾಹಿತರಾಗಿದ್ದ ಇವರು ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರವಾದ ಕಾರಣಗಳು ಇನ್ನು ತಿಳಿದುಬಂದಿಲ್ಲ. ವಿಷಯ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿದ್ದಾರೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!