ನಾಪತ್ತೆಯಾಗಿದ್ದ ಇಬ್ಬರು ಪ್ರೇಮಿಗಳು ಆತ್ಮಹತ್ಯೆ
ಚಾಮರಾಜನಗರ: ಹನೂರು ತಾಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೇರಟ್ಟಿ ಗ್ರಾಮದಲ್ಲಿ ಇಬ್ಬರು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಹನೂರು ತಾಲೂಕಿನ ಮಿಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಕ್ಕುಂದಿ ಗ್ರಾಮದ ನಾಗೇಂದ್ರ (21) ಪಾಲಾರ್ ಗ್ರಾಮದ ನದಿಯಾ (19) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳಾಗಿದ್ದಾರೆ.
ಪ್ರಕರಣ ಏನು?: ಪಾಲಾರ್ ಗ್ರಾಮದ ಮಾದೇವರ ಪುತ್ರಿ ನದಿಯಾ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದ ಐಪಿಹೆಚ್ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆದರೆ, ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದರು. ಈ ವಿಚಾರವಾಗಿ ಐಪಿಹೆಚ್ ಸಂಸ್ಥೆಯವರು ಪೋಷಕರಿಗೆ ಮಾಹಿತಿ ನೀಡಲು ಪ್ರಯತ್ನಿಸಿದ್ದಾರೆ. ಆದರೆ, ಪಾಲಾರ್ ಗ್ರಾಮದಲ್ಲಿ ನೆಟ್ವರ್ಕ್ ಸಮಸ್ಯೆಯಿಂದ ಮಾಹಿತಿ ತಿಳಿಯುವುದು ತಡವಾಗಿದೆ.




