ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಢಿಕ್ಕಿ: 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವು
ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಕೊತ್ತನೂರು ಗ್ರಾಮದ ಬಳಿ ನಡೆದಿದೆ.
ಮೃತ ಬಾಲಕಿಯನ್ನು ಅಂಕಿತಾ (9) ಎಂದು ಗುರುತಿಸಲಾಗಿದೆ. ಬಾಲಕಿ ಕಲಬುರಗಿ ಜಿಲ್ಲೆಯ ಚಿಂಚೋಳಿ ಮೂಲದ ರಾಜೇಂದ್ರ ಹಾಗೂ ಭಾಗ್ಯಮ್ಮ ದಂಪತಿ ಮಗಳು ಎಂದು ತಿಳಿದುಬಂದಿದೆ. ಕುಟುಂಬ ಹೊಸಕೋಟೆಯಲ್ಲಿ ವಾಸವಾಗಿತ್ತು.
ಜಾತ್ರೆಗೆ ತೆರಳಿದ್ದ ಭಾಗ್ಯಮ್ಮ ಸಂಬಂಧಿಕ ಮಹೇಶ್ ಎಂಬವರಿಗೆ ಸೇರಿದ ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ಮಕ್ಕಳೊಂದಿಗೆ ಬೆಂಗಳೂರಿಗೆ ವಾಪಸ್ಸಾಗುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ.




