ವಿಟ್ಲ: ಏಪ್ರಿಲ್ 10ರಂದು ದ.ಕ ಬೆಳೆಗಾರರ ಸಾವಯವ ಸಂಯುಕ್ತ ರೈತ ಉತ್ಪಾದಕ ಕಂಪೆನಿ ಲಿಮಿಟೆಡ್(DKGOC) ಉದ್ಘಾಟನೆ
ವಿಟ್ಲ: ದಕ್ಷಿಣ ಕನ್ನಡ ಬೆಳೆಗಾರರ ಸಾವಯವ ಸಂಯುಕ್ತ ರೈತ ಉತ್ಪಾದಕ ಕಂಪನಿ ಲಿಮಿಟೆಡ್ (DKGOC Farmer Producer Company Limited) ಉದ್ಘಾಟನಾ ಸಮಾರಂಭವು ಏಪ್ರಿಲ್ 10ರಂದು ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ವಿಟ್ಲದ ಪುತ್ತೂರು ರಸ್ತೆಯ ಖಾದರ್ ಕಾಂಪ್ಲೆಕ್ಸ್‌ನ 1ನೇ ಮಹಡಿಯಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಉದ್ಘಾಟಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಿ.ಕೆ ಗ್ರೂಪ್ ಆಫ್ ಕಂಪನೀಸ್ ಸಂಸ್ಥಾಪಕರಾದ ಆಲ್ವಿನ್ ಜೋಯಲ್ ನೊರೊನ್ಹಾ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಧರ್ಮಗುರು ರೆವೆ.ಫಾ. ಐವನ್ ಮೈಕಲ್ ರೋಡ್ರಿಗಸ್, ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷ ಕರುಣಾಕರ ನಾಯೊಟ್ಟು, ವೈದ್ಯೆ ಡಾ. ಗೀತಾ ಪ್ರಕಾಶ್, ವಾಣಿಜ್ಯ ಮತ್ತು ಕೈಗಾರಿಕ ಸಂಘದ ಅಧ್ಯಕ್ಷ ಬಾಬು ಕೆ., ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಎಮ್.ಎಸ್. ಮೊಹಮ್ಮದ್, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಮನ್ಮಥ ಶೆಟ್ಟಿ, ಉದ್ಯಮಿ ವಿ.ಎ. ರಶೀದ್, ವಿಟ್ಲ ಠಾಣೆಯ ಪಿಎಸ್‌ಐ ರಾಮಕೃಷ್ಣ, ಪುರೋಹಿತ ಕೃಷ್ಣ ಉಪಾಧ್ಯಾಯ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ.
ಖ್ಯಾತ ಯೂಟ್ಯೂಬರ್ ವಿ.ಜೆ. ವಿಖ್ಯಾತ್ ಕಾರ್ಯಕ್ರಮ ನಿರೂಪಣೆ ನಡೆಸಲಿದ್ದು, ಸಂಸ್ಥೆಯ ಅಧ್ಯಕ್ಷ ಪುನೀತ್ ವಿ.ಜೆ, ಉಪಾಧ್ಯಕ್ಷ ಮಹೇಶ್ ಹಾಗೂ ಸಿಬ್ಬಂದಿ ವರ್ಗವು ಸಾರ್ವಜನಿಕರಿಗೆ ಆಹ್ವಾನ ನೀಡಿದೆ.




