April 9, 2026

ಮಂಗಳೂರು: ಎಎಸ್‌ಐ ಕೊಲೆ ಯತ್ನ ಪ್ರಕರಣ: ಆರೋಪಿ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿ

0
image_editor_output_image-52504210-1775725518334.jpg

ಮಂಗಳೂರು: ಎಎಸ್‌ಐ ಐತಪ್ಪ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ಸಮೀರ್ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ.

ಆರೋಪಿ ಸಮೀರ್ ವಿರುದ್ಧ ಸಾಮೂಹಿಕ ಅತ್ಯಾಚಾರ ಸಹಿತ 14 ಪ್ರಕರಣಗಳು ದಾಖಲಾಗಿವೆ. ಈತನ ಸುಳಿವು ಪತ್ತೆಯಾದಲ್ಲಿ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ.

ಈ ಹಿಂದೆ ಆರೋಪಿ ಸಫ್ವಾನ್ ಎಂಬಾತನ ಮೇಲೂ ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸಿ ಕಾನೂನು ಕ್ರಮ ಜರುಗಿಸಲಾಗಿತ್ತು ಎಂದು ಕಮಿಷನರ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!