May 25, 2026

ಮಾಣಿ ಸಮೀಪದ ನೇರಳಕಟ್ಟೆ ನಿವಾಸಿ ಪುತ್ತುಬ್ಬ ಹಾಜಿ ನಿಧನ

0
image_editor_output_image814955527-1775798420503.jpg

ಬಂಟ್ವಾಳ: ಮಾಣಿ ಸಮೀಪದ ನೇರಳಕಟ್ಟೆ ನಿವಾಸಿ ಅಬ್ದುಲ್ಲಾ ಯೂಸುಫ್ ಹಾಜಿ (ಪುತ್ತುಬ್ಬ ಹಾಜಿ) 67 ಅವರು ಅಲ್ಪಕಾಲದ ಅನಾರೋಗ್ಯದಿಂದ ಗುರುವಾರ ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಕೊಡಾಜೆ ಬದ್ರಿಯಾ ಜುಮಾ ಮಸೀದಿ ಆಡಳಿತ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದ ಪುತ್ತುಬ್ಬ ಹಾಜಿಯವರು ಸೌಮ್ಯ ಸ್ವಭಾವದವರಾಗಿದ್ದು, ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು. ಮೃತರು ಪತ್ನಿ, ಓರ್ವ ಪುತ್ರ, ಮೂವರು ಪುತ್ರಿಯರ ಸಹಿತ ಅಪಾರ ಸಂಖ್ಯೆಯ ಬಂಧುಗಳನ್ನು ಅಗಲಿದ್ದಾರೆ.

ಮೃತರ ಅಂತ್ಯಕ್ರಿಯೆ ಸಂಜೆ 4 ರ ವೇಳೆಗೆ ಕೊಡಾಜೆ ಬದ್ರಿಯಾ ಜುಮಾ ಮಸೀದಿ ವಠಾರದಲ್ಲಿ ನಡೆಯಲಿದೆ ಎಂದು ಕುಟುಂಬಿಕರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!