April 11, 2026

ಉಡುಪಿ: ರೌಡಿ ಶೀಟರ್ ಕಾರ್ತಿಕ್ ಆಚಾರ್ ಗಡಿಪಾರು

0
image_editor_output_image-660828620-1775909607252.jpg

ಉಡುಪಿ: ಜಿಲ್ಲೆಯ ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಗೆ ಸೇರಿದ ರೌಡಿ ಶೀಟರ್ ಕಾರ್ತಿಕ್ ಆಚಾರ್ ವಿರುದ್ಧ ಗಡಿಪಾರು ಆದೇಶವನ್ನು ಹೊರಡಿಸಲಾಗಿದೆ.

ಕುಂದಾಪುರ ತಾಲೂಕು ಇಡೂರು ಕುಂಜ್ಞಾಡಿ ಗ್ರಾಮದ ಹೊಸಿಮನೆ ಕಾರ್ತಿಕ್ ನಿಲಯದ ಕಾರ್ತಿಕ್ ಆಚಾರ್ ವಿರುದ್ಧ ವಿಶೇಷ ಕಾರ್ಯಾಂಗ ದಂಡಾಧಿಕಾರಿ ಹಾಗೂ ಉಡುಪಿ ಪೊಲೀಸ್ ಅಧೀಕ್ಷಕರು ಎಪ್ರಿಲ್ 9ರಂದು ಗಡಿಪಾರು ಆದೇಶ ಹೊರಡಿಸಿದ್ದಾರೆ.

ಈತನ ವಿರುದ್ಧ ಒಟ್ಟು 4 ಪ್ರಕರಣ ದಾಖಲಾಗಿದ್ದು, ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಈತನ ಮೇಲೆ ರೌಡಿಶೀಟ್‌ ತೆರೆಯಲಾಗಿದೆ. ಈತನನ್ನು ಬೆಂಗಳೂರು ಕಮೀಷನರೇಟ್ ನ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!