April 12, 2026

ಹುಲಿಕಲ್ ಘಾಟ್ ನಲ್ಲಿ ಮತ್ತೆ ಭೂಕುಸಿತ: ಎಲ್ಲಾ ಮಾದರಿಯ ವಾಹನಗಳ ಸಂಚಾರ ನಿಷೇಧ

0
image_editor_output_image-1443699413-1775963415844.jpg

ಉಡುಪಿ/ಶಿವಮೊಗ್ಗ: ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ 52ರ ಬಾಳೆಬರೆ (ಹುಲಿಕಲ್) ಘಾಟ್ ಪ್ರದೇಶದಲ್ಲಿ ರಸ್ತೆ ಕಾಮಗಾರಿ ವೇಳೆ ಮತ್ತೆ ಭೂಕುಸಿತ ಉಂಟಾಗಿದ್ದು, ಸುರಕ್ಷತೆಯ ದೃಷ್ಟಿಯಿಂದ ಈ ಮಾರ್ಗದಲ್ಲಿ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.

ದಿನಾಂಕ 09/04/2026ರಂದು ಘಾಟಿಯಲ್ಲಿ ತಡೆಗೋಡೆ ನಿರ್ಮಾಣ ಮತ್ತು ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದಾಗ, ಸುಮಾರು 12 ಮೀಟರ್ ಎತ್ತರದ ಕಾಂಕ್ರೀಟ್ ರಸ್ತೆಯ ಕೆಳಭಾಗದಲ್ಲಿ 5 ಅಡಿ ಅಗಲದವರೆಗೆ ಮಣ್ಣು ಕುಸಿದಿದೆ. ಇದರಿಂದಾಗಿ ಹಾಲಿ ಇರುವ ಕಾಂಕ್ರೀಟ್ ರಸ್ತೆಯ ಮೇಲ್ಭಾಗದಲ್ಲಿ ದೊಡ್ಡ ಬಿರುಕುಗಳು ಕಾಣಿಸಿಕೊಂಡಿದ್ದು, ವಾಹನ ಸಂಚಾರಕ್ಕೆ ಈ ರಸ್ತೆ ಅತ್ಯಂತ ಅಪಾಯಕಾರಿಯಾಗಿದೆ.

ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಹಾಗೂ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರು ನೀಡಿದ ವರದಿಯನ್ನು ಆಧರಿಸಿ, ಉಡುಪಿ ಜಿಲ್ಲಾಧಿಕಾರಿಗಳು ಈ ಆದೇಶ ಹೊರಡಿಸಿದ್ದಾರೆ. ಮೋಟಾರು ವಾಹನ ಕಾಯ್ದೆ 1988ರ ನಿಯಮ 115ರ ಅನ್ವಯ, ರಕ್ಷಣಾತ್ಮಕ ಕಾಮಗಾರಿ ಪೂರ್ಣಗೊಳ್ಳುವವರೆಗೆ ಈ ರಸ್ತೆಯ ಮೂಲಕ ಸಂಚಾರವನ್ನು ನಿರ್ಬಂಧಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!