ಬಿಹಾರ: ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ
ಬಿಹಾರ: ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕರಿಸಿದರು.
ಪಾಟ್ನಾದ ಲೋಕ ಭವನದಲ್ಲಿ ಬಿಹಾರದ ರಾಜ್ಯಪಾಲ ಸೈಯದ್ ಅತಾ ಹಸ್ನೈನ್ ಅವರು ಸಾಮ್ರಾಟ್ ಚೌಧರಿಗೆ ಪ್ರಮಾಣವಚನ ಬೋಧಿಸಿದರು. ಈ ಮೂಲಕ ಸಾಮ್ರಾಟ್ ಚೌಧರಿ ಬಿಹಾರದ ಬಿಜೆಪಿಯ ಮೊದಲ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಪಾಟ್ನಾದಲ್ಲಿರುವ ರಾಜ್ಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಸಾಮ್ರಾಟ್ ಚೌಧರಿ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿತ್ತು.




