May 31, 2026

ಯೋಗೀಶ್‌ ಗೌಡ ಕೊಲೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ

0
deccanherald_import_sites_dh_files_articleimages_2023_06_05_vinay-1224870-1685910803.jpg

ಧಾರವಾಡ: ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೀಶ್‌ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿ 19 ಮಂದಿಯನ್ನು ದೋಷಿ ಎಂದು ತೀರ್ಮಾನಿಸಿ ಜನಪ್ರತಿನಿಧಿಗಳ ವಿಶೇಷ‌ ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ.

ದಶಕದ ಹಿಂದೆ ನಡೆದಿದ್ದ ಕೊಲೆ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್‌ ಗಜಾನನ್‌ ಭಟ್‌ ಅವರು ಬುಧವಾರ ತೀರ್ಪು ಪ್ರಕಟಿಸಿದ್ದು, 19 ಮಂದಿಯನ್ನು ದೋಷಿಗಳೆಂದು ಘೋಷಿಸಿ ತೀರ್ಪು ನೀಡಿದ್ದಾರೆ. ಗುರುವಾರ (ಏಪ್ರಿಲ್ 16) ಶಿಕ್ಷೆ ಪ್ರಮಾಣದ ಬಗ್ಗೆ ವಾದಮಂಡನೆ ನಡೆಯಲಿದ್ದು, ಬಳಿಕ ನ್ಯಾಯಾಲಯ ಶಿಕ್ಷೆ ಪ್ರಮಾಣವನ್ನು ಪ್ರಕಟಿಸಲಿದೆ.

ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2016ರ ಜೂನ್ 15ರಂದು ಯೋಗೀಶ ಕೊಲೆ ನಡೆದಿತ್ತು. ಈ ಪ್ರಕರಣವನ್ನು ಮೊದಲಿಗೆ ತನಿಖೆ ನಡೆಸಿದ್ದ ಧಾರವಾಡ ಪೊಲೀಸರು 6 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಶಾಸಕ ವಿನಯ್‌ ಕುಲಕರ್ಣಿ ಹೆಸರು ಕೈಬಿಡಲಾಗಿತ್ತು. ನಂತರ ಸಿಬಿಐ ತನಿಖೆ ನಡೆಸಿ, ದೋಷಾರೋಪ ಪಟ್ಟಿಯಲ್ಲಿ ಹೊಸದಾಗಿ 7ರಿಂದ 21 ಆರೋಪಿಗಳನ್ನು ಸೇರ್ಪಡೆ ಮಾಡಲಾಗಿತ್ತು. ಪ್ರಕರಣದಲ್ಲಿ ವಿನಯ್‌ ಕುಲಕರ್ಣಿ ಅವರು 15ನೇ ಆರೋಪಿಯಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!