May 31, 2026

ಸಾಮಾಜಿಕ ಜಾಲತಾಣದಲ್ಲಿ ನಿಂದನೆ ಪ್ರಕರಣ: ವಿಚಾರಣೆಗೆ ಹಾಜರಾಗದ ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

0
puneeth-kerehalli.jpg

ಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿ ನಿಂದನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ವಿಚಾರಣೆಗೆ ಹಾಜರಾಗದ ಕಾರಣ ಪುನೀತ್ ಕೆರೆಹಳ್ಳಿಯನ್ನು ಬೆಳ್ತಂಗಡಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

ಸಾಮಾಜಿಕ ಜಾಲತಾಣವಾದ ಯೂಟ್ಯೂಬ್‌ ನಲ್ಲಿ ಪುನೀರ್‌ ಕೆರೆಹಳ್ಳಿ ಅಶ್ಲೀಲವಾಗಿ ಮಾತನಾಡಿರುವ ವಿಡಿಯೋ ಯೂಟ್ಯೂಬ್‌ನಲ್ಲಿ ಪ್ರಸಾರ ಮಾಡಿರುವ ಬಗ್ಗೆ ದೂರು ದಾಖಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ಪೊಲೀಸರು ನೀಡಿದ ನೋಟಿಸ್ ಗೆ ಹಾಜರಾಗದ ಕಾರಣ ಬೆಳ್ತಂಗಡಿ ನ್ಯಾಯಾಲಯದಿಂದ ಬಂಧನ ವಾರಂಟ್ ಪಡೆದು ಎ.15ರಂದು ಬೆಂಗಳೂರಿಗೆ ತೆರಳಿದ ಬೆಳ್ತಂಗಡಿ ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದಾರೆ.

ಪುನೀತ್‌ ಕೆರೆಹಳ್ಳಿಯನ್ನು ಇಂದು ಸಂಜೆಯ ವೇಳೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದು ಬಳಿಕ ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

Leave a Reply

Your email address will not be published. Required fields are marked *

error: Content is protected !!