April 17, 2026

ಧರ್ಮಸ್ಥಳ: ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಗೆ ನೋಟಿಸ್ ಜಾರಿ ಮಾಡಿ: ಬೆಳ್ತಂಗಡಿ ಪೊಲೀಸರಿಗೆ ವಿಶೇಷ ನ್ಯಾಯಾಲಯ ನಿರ್ದೇಶನ

0
image_editor_output_image-328223811-1776403972617.jpg

ಮಂಗಳೂರು: ದಕ್ಷಿಣ ಕನ್ನಡದ ಬೆಳ್ತಂಗಡಿ ತಾಲೂಕಿನ ಎರಡು ಸ್ಥಳಗಳಲ್ಲಿ ಸರ್ಕಾರಿ ಭೂಮಿಯನ್ನು ಅತಿಕ್ರಮಣ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಧರ್ಮಾಧಿಕಾರಿ ಮತ್ತು ರಾಜ್ಯಸಭಾ ಸದಸ್ಯ ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ನೋಟಿಸ್ ಜಾರಿ ಮಾಡುವಂತೆ ಕರ್ನಾಟಕ ಭೂಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯವು ಬೆಳ್ತಂಗಡಿ ಪೊಲೀಸ್ ನಿರೀಕ್ಷಕರಿಗೆ ನಿರ್ದೇಶನ ನೀಡಿದೆ.

ನ್ಯಾಯಾಲಯವು ಎರಡು ಆದೇಶಗಳನ್ನು ಹೊರಡಿಸಿದೆ ಫೆಬ್ರವರಿ 19 ರಂದು ಮೊದಲನೆಯದು ಹಾಗೂ ಏಪ್ರಿಲ್ 2, 2026 ರಂದು ಎರಡನೆಯ ಆದೇಶ ಹೊರಡಿಸಿದೆ. ಮೊದಲನೆಯ ಆದೇಶವು ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಸರ್ವೆ ಸಂಖ್ಯೆ 96/1 ರಲ್ಲಿ 83 ಸೆಂಟ್ಸ್ ಸರ್ಕಾರಿ ಭೂಮಿಯ ಅತಿಕ್ರಮಣಕ್ಕೆ ಸಂಬಂಧಿಸಿದೆ. ಅಲ್ಲಿ ಈಗ ರಬ್ಬರ್ ತೋಟವಿದೆ. ಈ ಪ್ರಕರಣದಲ್ಲಿ ಎಸ್‌ಡಿಎಂ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎರಡನೇ ಪ್ರತಿವಾದಿಯಾಗಿದ್ದಾರೆ.

ಎರಡನೇ ಆದೇಶವು ಬೆಳ್ತಂಗಡಿ ಗ್ರಾಮದ ಸರ್ವೆ ಸಂಖ್ಯೆ 173/5 ರಲ್ಲಿ 25 ಸೆಂಟ್ಸ್ ಅತಿಕ್ರಮಣಕ್ಕೆ ಸಂಬಂಧಿಸಿದ್ದಾಗಿದ್ದು, ಅಲ್ಲಿ ಆಂಫಿಥಿಯೇಟರ್ ನಿರ್ಮಿಸಲಾಗಿದೆ. ಬೆಳ್ತಂಗಡಿ ಸಮಾಜ ಮಂದಿರ ಕಾರ್ಯದರ್ಶಿ ಈ ಪ್ರಕರಣದಲ್ಲಿ ಎರಡನೇ ಪ್ರತಿವಾದಿಯಾಗಿದ್ದಾರೆ.

ನಾಗರಿಕ ಸೇವಾ ಟ್ರಸ್ಟ್ ಅಧ್ಯಕ್ಷ ಕೆ. ಸೋಮನಾಥ ನಾಯಕ್ ನ್ಯಾಯಾಲಯಕ್ಕೆ ಸಲ್ಲಿಸಿದ ಎರಡು ಪ್ರತ್ಯೇಕ ಅರ್ಜಿಗಳ ಆಧಾರದ ಮೇಲೆ ನೋಟಿಸ್‌ಗಳನ್ನು ನೀಡಲಾಗಿದೆ. ಪ್ರತಿವಾದಿಗಳು ನ್ಯಾಯಾಲಯದ ಮುಂದೆ ಹಾಜರಾಗಲು ಮತ್ತು ಆಕ್ಷೇಪಣೆ ಇದ್ಜರೆ ಹೇಳಿಕೆಯನ್ನು ಸಲ್ಲಿಸಲು ಸೂಚಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!