ಬೆಳ್ತಂಗಡಿ: ದ್ವೇಷ ಭಾಷಣ ಪ್ರಕರಣ: ಬಂಧನವಾಗಿದ್ದ ಪುನೀತ್ ಕೆರೆಹಳ್ಳಿ ಬಿಡುಗಡೆ
ಬೆಳ್ತಂಗಡಿ: ಸಮಾಜದಲ್ಲಿ ದ್ವೇಷ ಉಂಟುಮಾಡುವ ಭಾಷಣ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಆರೋಪಕ್ಕೆ ಸಂಬಂಧಿಸಿ ಹಿಂದುತ್ವಪರ ಸಂಘಟನೆಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಬೆಳ್ತಂಗಡಿ ಠಾಣೆ ಪೊಲೀಸರು ಬಂಧಿಸಿದ್ದು, ಬಿಡುಗಡೆ ಮಾಡಲಾಗಿದೆ.
ಬೆಂಗಳೂರಿನ ಬಸವನಗುಡಿಯ ಆತನ ಕಚೇರಿಯಿಂದ ಪುನೀತ್ ಕೆರೆಹಳ್ಳಿಯನ್ನು ಬಂಧಿಸಿ ಬೆಳ್ತಂಗಡಿ ಠಾಣೆಗೆ ಕರೆತರಲಾಯಿತು. ಇಲ್ಲಿ ಧ್ವನಿ ಮಾದರಿ ಸಂಗ್ರಹಿಸಿದ ಬಳಿಕ ಠಾಣೆ ಜಾಮೀನಿನ ಮೇಲೆ ಬುಧವಾರ ಬಿಡುಗಡೆ ಮಾಡಲಾಗಿದೆ.
ಬೆಳ್ತಂಗಡಿಯ ಕಸಬಾ ಗ್ರಾಮದ ಹುಣೆಕಟ್ಟೆ ನಿವಾಸಿ ಜೋರಮ್ ಬರ್ಬೋಝ ಎಂಬುವರು 2025ರ ಆಗಸ್ಟ್ 7ರಂದು ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದರು. ಪ್ರಕರಣದ ಸಂಬಂಧ ಮೂರು ಬಾರಿ ನೋಟಿಸ್ ಜಾರಿ ಮಾಡಿದರೂ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಬೆಳ್ತಂಗಡಿ ನ್ಯಾಯಾಲಯ ಕೆರೆಹಳ್ಳಿ ವಿರುದ್ಧ ಬಂಧನ ವಾರಂಟ್ ಜಾರಿ ಮಾಡಿತ್ತು.




