ಬಂಟ್ವಾಳ: ಮನೆಯ ಹಿಂಭಾಗದ ಗುಡ್ಡದಲ್ಲಿ ಮರಕ್ಕೆ ನೇಣು ಬಿಗಿದು ಯುವಕ ಆತ್ಮಹತ್ಯೆ
ಪುತ್ತೂರು: ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ಮೂರಿಬೆಟ್ಟು ನಿವಾಸಿ ಕುಂಞಣ್ಣ ಮಣಿಯಾಣಿ ಅವರ ಪುತ್ರ ಹರ್ಷಿತ್ ಮಣಿಯಾಣಿ (29) ಏ.18ರಂದು ಮನೆಯ ಹಿಂಭಾಗದ ಗುಡ್ಡದಲ್ಲಿ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಆತ್ಮಹತ್ಯೆಗೆ ಕಾರಣ ತನಿಖೆಯ ನಂತರ ತಿಳಿದುಬರಬೇಕಿದೆ.
ಮೃತರು ತಂದೆ, ತಾಯಿ, ಸಹೊದರಿಯರು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.




