April 18, 2026

ನಾಟಕ ನೋಡುತ್ತಿದ್ದವರ ಮೇಲೆ ಕುಸಿದು ಬಿದ್ದ ಕಮಾನು ಗೋಡೆ: ಇಬ್ಬರು ಮಕ್ಕಳು ಸಾವು, ಹಲವರಿಗೆ ಗಾಯ

0
image_editor_output_image-2120680712-1776517001193.jpg

ರಾಯಚೂರು: ಬಯಲು ನಾಟಕ ನೋಡುತ್ತಿದ್ದವರ ಮೇಲೆ ಕಮಾನು ಗೋಡೆ ಕುಸಿದು ಬಿದ್ದು ಇಬ್ಬರು ಮಕ್ಕಳು ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಬೈಲ್ ಮರ್ಚೆಡ್ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ವಿಶ್ವನಾಥ್ (8) ಹಾಗೂ ಸಾನ್ವಿತ (2) ಎಂದು ಗುರುತಿಸಲಾಗಿದೆ. 7 ಜನರು ಕಮಾನು ಕೆಳಗೆ ಕುಳಿತು ನಾಟಕ ವೀಕ್ಷಿಸುತ್ತಿದ್ದರು. ಈ ವೇಳೆ ಕಮಾನಿನ ಗೋಡೆ ಕುಸಿದಿದೆ. ಪರಿಣಾಮ ಸ್ಥಳದಲ್ಲೇ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಅವಘಡದಲ್ಲಿ ನಾಲ್ವರು ಮಹಿಳೆಯರಿಗೆ ಗಂಭೀರ ಗಾಯವಾಗಿದೆ.

ಗಾಯಾಳುಗಳನ್ನು ಲಕ್ಷ್ಮಿ, ವಿಶಾಲಕ್ಷಿ, ಯಲ್ಲಮ್ಮ ಹಾಗೂ ಬಸಮ್ಮ ಎಂದು ಗುರುತಿಸಲಾಗಿದೆ. ಇವರಿಗೆ ಕಾಲು ಮುರಿದಿದೆ. ಬಸಮ್ಮ ಕೋಮಾ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Leave a Reply

Your email address will not be published. Required fields are marked *

error: Content is protected !!