ಮುರುಡೇಶ್ವರದ ದೇವಸ್ಥಾನದ ಬಳಿ ಗಾಂಜಾ ಸೇವನೆ: ಆರೋಪಿಯ ಸೆರೆ
ಭಟ್ಕಳ: ಮುರುಡೇಶ್ವರದ ದೇವಸ್ಥಾನದ ಸಮೀಪವಿರುವ ಸಮುದ್ರ ಕಿನಾರೆಯ ಸಾರ್ವಜನಿಕ ಸ್ಥಳದಲ್ಲಿ ಎ.19ರ ರವಿವಾರ ಸಂಜೆ ಗಾಂಜಾ ಸೇವನೆ ಮಾಡಿದ್ದ ಆರೋಪಿಯನ್ನು ಸ್ಥಳೀಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ರಾಜೇಶ್ವರಿ ನಗರದ ನಿವಾಸಿ ಉದಯಕುಮಾರ ಎಂಬಾತನನ್ನು ಮುರ್ಡೇಶ್ವರ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಹಣಮಂತ ಬೀರಾದಾರ ಅವರು ಪಂಚರ ಸಮಕ್ಷಮ ವಶಕ್ಕೆ ಪಡೆದುಕೊಳ್ಳಲಾಗಿದೆ.
ಆತನನ್ನು ಭಟ್ಕಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಿದಾಗ ಆತ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟ ಹಿನ್ನೆಲೆ ಆತನ ಮೇಲೆ ಪ್ರಕರಣ ದಾಖಲಿಸಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಧೀಶರು ಆದೇಶಿಸಿದ್ದಾರೆ.
ಈ ಬಗ್ಗೆ ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.




