April 24, 2026

ಮಂಗಳೂರು: MDMA ಮಾದಕ ವಸ್ತು ಮಾರಾಟ: ಇಬ್ಬರು ಆರೋಪಿಗಳ ಬಂಧನ

0
image_editor_output_image2026167804-1776676890993.jpg

ಮಂಗಳೂರು: ಜೆಪ್ಪಿನಮೊಗರು ಬಳಿ ಬೃಹತ್ ಪ್ರಮಾಣದ MDMA ಮಾದಕ ವಸ್ತುವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಕಂಕನಾಡಿ ನಗರ ಪೊಲೀಸರು ರವಿವಾರ ಬಂಧಿಸಿದ್ದಾರೆ.

ಬಂಧಿತರಿಂದ ₹46,50,000 ಮೌಲ್ಯದ 465.8 ಗ್ರಾಂ MDMA ವಶಪಡಿಸಿಕೊಳ್ಳಲಾಗಿದೆ.

ಬಂಧಿತರನ್ನು ಪಿಲಾರು ಹೊಸಗದ್ದೆ ನಿವಾಸಿ ಪರ್ವೇಜ್ ಅಲಿಯಾಸ್ ದಾವೂದ್ ಪರ್ವೇಜ್ (40) ಮತ್ತು ಈತನ ಸಹಚರ ನಜರತ್ ಅಲಿ (37) ಬಂಧಿತರು. ಆರೋಪಿಗಳು ಬೈಕ್‌ನಲ್ಲಿ ಮಾದಕ ವಸ್ತುವನ್ನು ಸಾಗಿಸುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.

ಪ್ರಮುಖ ಆರೋಪಿ ಪರ್ವೇಜ್ ಜಿಲ್ಲೆಯ ಹೊರಗಿನಿಂದ ಬೃಹತ್ ಪ್ರಮಾಣದಲ್ಲಿ ಡ್ರಗ್ಸ್ ತಂದು ಮಂಗಳೂರಿನ ಕಾಲೇಜು ವಿದ್ಯಾರ್ಥಿಗಳನ್ನು ಮತ್ತು ಯುವಕರನ್ನು ಗುರಿಯಾಗಿಸಿಕೊಂಡು ಮಾರಾಟ ಮಾಡುತ್ತಿದ್ದ ಎಂದು ತನಿಖೆಯಲ್ಲಿ ತಿಳಿದುಬಂದಿದೆ.

ಈತನ ವಿರುದ್ಧ ಈಗಾಗಲೇ ಪಾಂಡೇಶ್ವರ, ಬಂದರು, ವಾಮಂಜೂರು, ಬೆಂಗಳೂರಿನ ಅಮೃತಹಳ್ಳಿ ಹಾಗೂ ಉಡುಪಿ ಸೆನ್ ಠಾಣೆಗಳಲ್ಲಿ ಡ್ರಗ್ಸ್ ಮಾರಾಟದ ಪ್ರಕರಣಗಳು ದಾಖಲಾಗಿದ್ದು, ಈತ ಓರ್ವ ರೂಢಿಗತ ಅಪರಾಧಿಯಾಗಿದ್ದಾನೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *

error: Content is protected !!