April 21, 2026

ಕಾಪು: ಸ್ಕೂಟರ್ ಗೆ ಲಾರಿ ಢಿಕ್ಕಿ: ಸ್ಕೂಟರ್ ಸವಾರ ಸಾವು

0
image_editor_output_image2127147791-1776758224923.jpg

ಕಾಪು: ಲಾರಿಯೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮೂಡಬೆಟ್ಟು ಗ್ರಾಮದ ಬೃಂದಾವನ ಹೋಟೆಲ್ ಬಳಿ ಸೋಮವಾರ ಸಂಜೆ ಸಂಭವಿಸಿದ. ಅಪಘಾತದಲ್ಲಿ ಸಹ ಸವಾರ ಗಾಯಗೊಂಡಿದ್ದಾರೆ.

ಮೃತರನ್ನು ಭೀಮಪ್ಪ ಹುನ್ನಳ್ಳಿ ಎಂದು ಗುರುತಿಸಲಾಗಿದೆ. ಏಪ್ರಿಲ್ 20ರಂದು ಸಂಜೆ 4 ಗಂಟೆ ಸುಮಾರಿಗೆ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಲಾರಿ ಚಾಲಕನು, ತನ್ನ ವಾಹನವನ್ನು ಅತೀ ವೇಗ ಮತ್ತು ನಿರ್ಲಕ್ಷ್ಯದಿಂದ ಚಲಾಯಿಸಿ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ರಭಸಕ್ಕೆ ಸ್ಕೂಟರ್ ಸವಾರ ಭೀಮಪ್ಪ ಮತ್ತು ಸಹ ಸವಾರ ಸಾಗರ್ ಅವರು ಡಿವೈಡರ್‌ಗೆ ಅಪ್ಪಳಿಸಿ ಬಿದ್ದಿದ್ದಾರೆ.

ಅಪಘಾತದ ಬಳಿಕ ಸ್ಥಳೀಯರು ಗಾಯಾಳುಗಳನ್ನು ಉಡುಪಿಯ ಆದರ್ಶ ಆಸ್ಪತ್ರೆಗೆ ದಾಖಲಿಸಿದರು. ಆದರೆ, ಪರೀಕ್ಷಿಸಿದ ವೈದ್ಯರು ಭೀಮಪ್ಪ ಅವರು ಈಗಾಗಲೇ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಗಾಯಾಳು ಸಾಗರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಕಾಪು ಪೊಲೀಸ್ ಠಾಣೆಯಲ್ಲಿ ಲಾರಿ ಚಾಲಕನ ವಿರುದ್ಧ ಬಿಎನ್‌ಎಸ್ (BNS) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!