April 21, 2026

ಮಂಗಳೂರು: ಕಳೆದ ಒಂದು ವರ್ಷದಿಂದ ಕಾನೂನು, ಸುವ್ಯವಸ್ಥೆ ಉತ್ತಮ: ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ. ಸಲೀಂ

0
image_editor_output_image-80682711-1776760674030.jpg

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು ವರ್ಷದಿಂದ ಕಾನೂನು ಮತ್ತು ಸುವ್ಯವಸ್ಥೆ ಉತ್ತಮವಾಗಿದ್ದು, ಇದೇ ರೀತಿಯ ಶಾಂತಿ ಕಾಪಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಡಾ| ಎಂ.ಎ. ಸಲೀಂ ತಿಳಿಸಿದ್ದಾರೆ.

ಮಂಗಳೂರಿಗೆ ಭೇಟಿ ನೀಡಿದ ಅವರು, ನಗರ ಪೊಲೀಸ್ ಕಮಿಷನ‌ರ್ ಕಚೇರಿಯಲ್ಲಿ ಜಿಲ್ಲೆಯ ಪೊಲೀಸ್ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಜಿಲ್ಲೆಯಲ್ಲಿ ಕಳೆದ ಒಂದು ವರ್ಷದಿಂದ ಯಾವುದೇ ಅಹಿತಕರ ಘಟನೆಗಳಿಲ್ಲದೆ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ. ಇದನ್ನೇ ಮುಂದೆಯೂ ಮುಂದುವರಿಸಿಕೊಂಡು ಹೋಗುವಂತೆ ಮತ್ತು ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಇರಿಸಿಕೊಳ್ಳುವಂತೆ ಪೊಲೀಸರಿಗೆ ನಿರ್ದೇಶನ ನೀಡಲಾಗಿದೆ.

Leave a Reply

Your email address will not be published. Required fields are marked *

error: Content is protected !!