April 22, 2026

ಬೆಳ್ತಂಗಡಿ: ಚಾರ್ಮಾಡಿ ಘಾಟ್ ನಲ್ಲಿ ಪಿಕಪ್ ವಾಹನ ಪಲ್ಟಿ: ಹತ್ತಕ್ಕೂ ಹೆಚ್ಚು ಮಂದಿಗೆ ಗಾಯ

0
image_editor_output_image-1823294716-1776826783403.jpg

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಚಾರ್ಮಾಡಿ ಘಾಟ್ ರಸ್ತೆಯ ಆರನೇ ತಿರುವಿನಲ್ಲಿ ಭೀಕರ ಅಪಘಾತ ಸಂಭವಿಸಿದೆ. 25 ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಪಿಕಪ್ ವಾಹನ ಪಲ್ಟಿಯಾದ ಪರಿಣಾಮ ಹತ್ತಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳಲ್ಲಿ ಆಂಧ್ರಪ್ರದೇಶ ಮತ್ತು ಬಳ್ಳಾರಿ ಮೂಲದ ಪ್ರಯಾಣಿಕರು ಸೇರಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತದ ತೀವ್ರತೆಗೆ ಸ್ಥಳದಲ್ಲೇ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ತಕ್ಷಣವೇ ಸ್ಥಳೀಯರ ನೆರವಿನಿಂದ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಯಿತು. SKSSF ಕಕ್ಕಿಂಜೆ ಅಂಬುಲೆನ್ಸ್, ಚಾರ್ಮಾಡಿ ಹಸನಬ್ಬ ಅವರ ತಂಡ ಹಾಗೂ ರಾಜ್ಯೋತ್ಸವ ಸೇವಾ ಅಂಬುಲೆನ್ಸ್ ಸೇರಿದಂತೆ ರಿಕ್ಷಾ ಮತ್ತು ಖಾಸಗಿ ಕಾರುಗಳ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಯಿತು.

ಎಲ್ಲಾ ಗಾಯಾಳುಗಳನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆ ಗೆ ದಾಖಲಿಸಲಾಗಿದೆ. ಕೆಲವರ ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆ ಮುಂದುವರಿದಿದೆ. ಈ ಬಗ್ಗೆ ಹಸನಬ್ಬ ಅವರ ಪುತ್ರ, ಎಡ್ವಕೇಟ್ ಅಯಾಝ್ ಮಾಹಿತಿ ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!