April 22, 2026

ಮಂಗಳೂರು: ಕಾಂಪೌಂಡ್ ಗೋಡೆ ಕುಸಿದು ಬಿದ್ದು ಕಾರುಗಳಿಗೆ ಹಾನಿ

0
image_editor_output_image-1242107119-1776862590254.jpg

ಮಂಗಳೂರು: ಜಿಲ್ಲೆಯ ಹಲವು ಭಾಗಗಳಲ್ಲಿ ಮಂಗಳವಾರ ರಾತ್ರಿ ಸುರಿದ ಭಾರೀ ಮಳೆ ಅವಾಂತರ ಸೃಷ್ಟಿಸಿದೆ. ನಗರದ ಅತ್ತಾವರ ಪ್ರದೇಶದಲ್ಲಿ ವರ್ಷದ ಹಿಂದಷ್ಟೇ ನಿರ್ಮಿಸಲಾಗಿದ್ದ ಕಾಂಪೌಂಡ್ ಗೋಡೆ ಕುಸಿದು ಬಿದ್ದಿದೆ.

ಘಟನೆಯಲ್ಲಿ ಗೋಡೆಯ ಪಕ್ಕದಲ್ಲಿ ನಿಲ್ಲಿಸಲಾಗಿದ್ದ ಹಲವು ಕಾರುಗಳು ಅವಶೇಷಗಳಡಿ ಸಿಲುಕಿ ಸಂಪೂರ್ಣ ಹಾನಿಗೊಳಗಾಗಿವೆ. ಘಟನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

ಸ್ಥಳೀಯವಾಗಿ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಹೆಚ್ಚಿನ ವಾಹನಗಳು ಆಗಮಿಸಿದ್ದವು. ಪಾರ್ಕಿಂಗ್‌ಗೆ ಜಾಗದ ಕೊರತೆಯಿಂದ ವಾಹನಗಳನ್ನು ಗೋಡೆಯ ಪಕ್ಕದಲ್ಲೇ ನಿಲ್ಲಿಸಲಾಗಿತ್ತು. ಆದರೆ ಭಾರೀ ಮಳೆಯ ಪರಿಣಾಮವಾಗಿ ಗೋಡೆ ಬಲಹೀನಗೊಂಡು ಏಕಾಏಕಿ ಕುಸಿದುಬಿದ್ದಿದೆ.

ಅದೃಷ್ಟವಶಾತ್, ಈ ಘಟನೆ ವೇಳೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಕಾರುಗಳು ಸಂಪೂರ್ಣ ಜಖಂಗೊಂಡಿದ್ದು, ವಾಹನ ಮಾಲೀಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸ್ಥಳೀಯರು ಮತ್ತು ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಜಖಂಗೊಂಡ ಕಾರುಗಳ ಅವಶೇಷಗಳನ್ನು ತೆರವುಗೊಳಿಸುವ ಕಾರ್ಯ ನಡೆಸಿದ್ದಾರೆ. ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!