April 23, 2026

ಇಂದು ಎಸೆಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ: Result ನೋಡಲು ಇಲ್ಲಿ ಕ್ಲಿಕ್ ಮಾಡಿ

0
image_editor_output_image-1915471780-1776885829310.jpg

ಬೆಂಗಳೂರು: ಎಸೆಸೆಲ್ಸಿ ಪರೀಕ್ಷೆ-೧ರ ಮೌಲ್ಯಮಾಪನ ಮುಕ್ತಾಯಗೊಂಡಿದ್ದು, ಎ.23ರ ಮಧ್ಯಾಹ್ನ 12 ಗಂಟೆಗೆ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.

ಫಲಿತಾಂಶವನ್ನು https://karresults.nic.in ಲಿಂಕ್ ಅಥವಾ KarnatakaOne Mobile App ಮೂಲಕ ಪಡೆಯಬಹುದಾಗಿದೆ. ಅಲ್ಲದೆ, ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸಾಪ್/ಎಸ್ಎಂಎಸ್ ಮೂಲಕವೂ ಫಲಿತಾಂಶದ ಮಾಹಿತಿಯನ್ನು ಕಳುಹಿಸಲಾಗುತ್ತದೆ.

ಈ ವರ್ಷ ಪ್ರಥಮ ಬಾರಿಗೆ ವಿಶೇಷವಾಗಿ, ವಿದ್ಯಾರ್ಥಿಗಳ ಫಲಿತಾಂಶದ ಅಂಕಪಟ್ಟಿಯನ್ನು ಡಿಜಿಲಾಕರ್ನಲ್ಲಿಯೂ ಅಪ್ಲೋಡ್ ಮಾಡಲಾಗುತ್ತದೆ. ಅರ್ಹ ವಿದ್ಯಾರ್ಥಿಗಳು ಅಂಕಪಟ್ಟಿಯನ್ನು https://www.digilocker.gov.in ನಲ್ಲಿ ಡೌನ್ಲೋಡ್ ಮಾಡಿಕೊಳ್ಳಬಹುದು.

ಡಿಜಿಲಾಕರ್ ನಿಂದ ಡೌನ್ಲೋಡ್ ಮಾಡಿಕೊಳ್ಳಲು ಉಪಯೋಗವಾಗುವ ವಿಡಿಯೋವನ್ನು https://tinyurl.com/mw84wmh9 ನಲ್ಲಿ ಅಪ್ಲೋಡ್ ಮಾಡಲಾಗಿದೆ. ಇನ್ನು ಫಲಿತಾಂಶ ಪಟ್ಟಿಯನ್ನು ಎ.೨೩ರಂದೇ ಸಂಬAಧಿತ ಶಾಲೆಗಳಿಗೂ ಕಳುಹಿಸಲಾಗುತ್ತದೆ ಎಂದು ಮಂಡಳಿ ಪ್ರಕಟನೆಯಲ್ಲಿ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!