April 23, 2026

ಎಸೆಸೆಲ್ಸಿ ಫಲಿತಾಂಶ: ಬಂಟ್ವಾಳದ ದಾರುಲ್ ಇಝಾ ಶಾಲೆಗೆ ಶೇ.100 ಫಲಿತಾಂಶ: ಉಸ್ಮಾನ್ ಹಸನ್ ಅಶರ್ ಗೆ 592 ಅಂಕ

0
image_editor_output_image818487937-1776941468798.jpg

ಬಂಟ್ವಾಳ: ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ದಾರುಲ್ ಇಝಾ ಶಾಲೆಯ ವಿದ್ಯಾರ್ಥಿಗಳು ಉಜ್ವಲ ಸಾಧನೆ ಮೆರೆದಿದ್ದಾರೆ. ಎಲ್ಲ ವಿದ್ಯಾರ್ಥಿಗಳೂ ಉತ್ತೀರ್ಣರಾಗುವ ಮೂಲಕ ಈ ವರ್ಷವೂ 100 ಶೇಕಡಾ ಫಲಿತಾಂಶವನ್ನು ದಾಖಲಿಸಿ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

ಈ ಸಾಲಿನಲ್ಲಿ ಒಟ್ಟು 5 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ. 22 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ 6 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ವಿದ್ಯಾರ್ಥಿಗಳಲ್ಲಿ ಉಸ್ಮಾನ್ ಹಸನ್ ಅಶರ್ (592) ಪ್ರಥಮ ಸ್ಥಾನ ಪಡೆದು ಶಾಲೆಗೆ ಗೌರವ ತಂದಿದ್ದಾರೆ.

ಮೊಹಮ್ಮದ್ ಹಾಶಿರ್ (547) ದ್ವಿತೀಯ ಸ್ಥಾನ ಮತ್ತು ಜೈನಬತುಲ್ ಮರ್ಝಕಾ (546) ತೃತೀಯ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ಇದೇ ವೇಳೆ ವಿಜೇತ್ (543) ಮತ್ತು ಫಾತಿಮಾ ಸಲ್ವಾ (542) ಅಂಕಗಳನ್ನು ಪಡೆದು ಶ್ಲಾಘನೀಯ ಸಾಧನೆ ಮಾಡಿದ್ದಾರೆ.

ಶಾಲೆಯ ಪ್ರಾಂಶುಪಾಲರಾದ ಮೊಹಮ್ಮದ್ ಸಿನಾನ್ ಅವರು ಪ್ರಕಟಣೆಯಲ್ಲಿ ತಿಳಿಸಿರುವಂತೆ, ವಿದ್ಯಾರ್ಥಿಗಳ ಈ ಸಾಧನೆಗೆ ಶಿಕ್ಷಕರ ಪರಿಶ್ರಮ ಹಾಗೂ ಪೋಷಕರ ಸಹಕಾರ ಪ್ರಮುಖ ಕಾರಣವಾಗಿದೆ ಎಂದು ತಿಳಿಸಿದ್ದಾರೆ.

ಶಾಲೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದ ವಿದ್ಯಾರ್ಥಿಗಳ ಸಾಧನೆಯನ್ನು ಹರ್ಷದಿಂದ ಅಭಿನಂದಿಸಿದ್ದಾರೆ

Leave a Reply

Your email address will not be published. Required fields are marked *

error: Content is protected !!