April 24, 2026

ಈಶ್ವರಮಂಗಲ ತ್ವೈಬಾ ಸಂಸ್ಥೆಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ. 100 ಫಲಿತಾಂಶ

0
IMG-20260423-WA0002.jpg

ಈಶ್ವರಮಂಗಲ: ಧಾರ್ಮಿಕ ಮತ್ತು ಲೌಕಿಕ ಶಿಕ್ಷಣದ ಸಮನ್ವಯದೊಂದಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿರುವ ಇಲ್ಲಿನ ಪ್ರತಿಷ್ಠಿತ ತ್ವೈಬಾ ವಿದ್ಯಾಸಂಸ್ಥೆಯು ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ನೂರಕ್ಕೆ ನೂರು ಫಲಿತಾಂಶ ದಾಖಲಿಸುವ ಮೂಲಕ ಅಭೂತಪೂರ್ವ ಸಾಧನೆ ಮಾಡಿದೆ.

ಸಂಸ್ಥೆಯ ಒಟ್ಟು 12 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಎಲ್ಲರೂ ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆಯಾಗುವ ಮೂಲಕ ಸಂಸ್ಥೆಗೆ ಕೀರ್ತಿ ತಂದಿದ್ದಾರೆ. ಆಧುನಿಕ ಶಿಕ್ಷಣದ ಜೊತೆಗೆ ನೈತಿಕ ಮತ್ತು ಧಾರ್ಮಿಕ ಮೌಲ್ಯಗಳನ್ನು ಮೈಗೂಡಿಸಿಕೊಂಡಿರುವ ಈ ವಿದ್ಯಾರ್ಥಿಗಳ ಸಾಧನೆಯು ಪೋಷಕರಲ್ಲಿ ಮತ್ತು ಸ್ಥಳೀಯರಲ್ಲಿ ಸಂತಸ ಮೂಡಿಸಿದೆ.

ಕೇವಲ ಪಠ್ಯಕ್ಕಷ್ಟೇ ಸೀಮಿತವಾಗದೆ, ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ ವಾತಾವರಣವನ್ನು ಸಂಸ್ಥೆ ಕಲ್ಪಿಸಿಕೊಟ್ಟಿದೆ. ಶಿಕ್ಷಕರ ನಿರಂತರ ಮಾರ್ಗದರ್ಶನ ಹಾಗೂ ವಿದ್ಯಾರ್ಥಿಗಳ ಕಠಿಣ ಪರಿಶ್ರಮವೇ ಈ ಶೇ. 100 ಫಲಿತಾಂಶಕ್ಕೆ ಕಾರಣ ಎಂದು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಅಝೀಝ್ ಮಿಸ್ಬಾಹಿ ಸಂತೋಷ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!