June 9, 2026

ವಿಟ್ಲ: ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ

0
IMG-20260423-WA0006.jpg

ವಿಟ್ಲ: ಸ್ಥಳೀಯ ವಿಠ್ಠಲ್ ಜೆಸೀಸ್ ಇಂಗ್ಲಿಷ್ ಮೀಡಿಯಂ ಹೈ ಸ್ಕೂಲ್ ಈ ಬಾರಿ ನಡೆದ ಹೈಸ್ಕೂಲ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿ ಗಮನಾರ್ಹ ಸಾಧನೆ ಮಾಡಿದೆ.

ಶಾಲೆಯ ಒಟ್ಟು 105 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಎಲ್ಲರೂ ಉತ್ತೀರ್ಣರಾಗಿದ್ದಾರೆ. ಇದರಲ್ಲಿ 68 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದುಕೊಂಡಿದ್ದು, 37 ಮಂದಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.

600ಕ್ಕೂ ಹೆಚ್ಚು ಅಂಕಗಳನ್ನು 21 ವಿದ್ಯಾರ್ಥಿಗಳು ಗಳಿಸಿದ್ದು, ಶಾಲೆಯ ಸಾಧನೆಗೆ ಮತ್ತಷ್ಟು ಮೆರಗು ತಂದಿದೆ. ಒಟ್ಟು ಫಲಿತಾಂಶದಲ್ಲಿ ಶೇ.95.34 ರಷ್ಟು ಉತ್ತಮ ಸಾಧನೆ ದಾಖಲಾಗಿದೆ.

ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ನಿರ್ವಹಣಾ ಮಂಡಳಿ, ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದ ಹರ್ಷ ವ್ಯಕ್ತಪಡಿಸಿದ್ದು, ವಿದ್ಯಾರ್ಥಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!