June 9, 2026

ಎಸೆಸೆಲ್ಸಿ ಕಡಿಮೆ ಅಂಕ ಬಂದಿದೆ ಎಂದು ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

0
image_editor_output_image-541718485-1777005124319.jpg

ಮೈಸೂರು : ನಂಜನಗೂಡು ನಗರದಲ್ಲಿರುವ ಖಾಸಗಿ ಶಾಲೆಯಲ್ಲಿ ಎಸೆಸೆಲ್ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಬಾಲಕಿ ಪ್ರಥಮ ದರ್ಜೆಯಲ್ಲಿ ಪಾಸ್ ಆಗಿದ್ದರೂ ಕೂಡ ಕಡಿಮೆ ಅಂಕ ಬಂದಿದೆ ಎಂದು ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ನಂಜನಗೂಡು ತಾಲೂಕಿನ ಕುರಹಟ್ಟಿ ಗ್ರಾಮದ ಶಿವಕುಮಾ‌ರ್ ಮತ್ತು ಸವಿತಾ ದಂಪತಿಗಳ ಪುತ್ರಿ ತ್ರಿಶಾಲ (16) ಮೃತ ಬಾಲಕಿ.

ನಂಜನಗೂಡು ನಗರದ ಖಾಸಗಿ ಪ್ರೌಢಶಾಲೆಯಲ್ಲಿ ಎಸೆಸೆಲ್ಸಿ ವಿದ್ಯಾಭ್ಯಾಸ ಮಾಡಿ ಫಲಿತಾಂಶಕ್ಕಾಗಿ ಕಾಯುತ್ತಿದ್ದಳು.

ಇಂದು ಎಸೆಸೆಲ್ಸಿ ಫಲಿತಾಂಶ ಬಂದ ಬಳಿಕ 440 ಅಂಕಗಳನ್ನು ಗಳಿಸಿಕೊಂಡು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿದ್ದ ಮೃತ ಬಾಲಕಿ ತ್ರಿಶಾಲ, ನಾನು ಪರೀಕ್ಷೆಯನ್ನು ಡಿಸ್ಟಿಂಕ್ಷನ್ ಬರುವ ಮಟ್ಟಕ್ಕೆ ಬರೆದಿದ್ದೇನೆ. ಪ್ರಥಮ ದರ್ಜೆಯಲ್ಲಿ ತೆರ್ಗಡೆಯಾಗಿರುವುದು ಕಡಿಮೆ ಅಂಕ ಎಂದು ಮನನೊಂದು ಮನೆಯಲ್ಲಿ ಯಾರು ಇಲ್ಲದ ಸಮಯ ನೋಡಿ ನೇಣಿಗೆ ಶರಣಾಗಿದ್ದಾಳೆ ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!