June 9, 2026

ಸಚಿವ ಡಿ.ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರ: ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ

0
image_editor_output_image829656316-1777005363480.jpg

ಬೆಂಗಳೂರು: ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ.ಸುಧಾಕರ್ ಅವರ ಆರೋಗ್ಯ ಸ್ಥಿತಿ ಕ್ಷೀಣಿಸಿದ್ದು, ಸದ್ಯ ಎಲೆಕ್ಟ್ರಾನಿಕ್ ಸಿಟಿಯ ಕಿಮ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಕೆಲ ದಿನಗಳ ಹಿಂದೆ ಸಚಿವ ಸುಧಾಕರ್ ಅವರು ಸಾಮಾನ್ಯ ಮೊಣಕಾಲು ಶಸ್ತ್ರಚಿಕಿತ್ಸೆಗಾಗಿ ಯಶವಂತಪುರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆಪರೇಷನ್ ಯಶಸ್ವಿಯಾದ ನಂತರದ ದಿನಗಳಲ್ಲಿ ಅವರಿಗೆ ಹಠಾತ್ತನೆ ಶ್ವಾಸಕೋಶದ ಸೋಂಕು ಕಾಣಿಸಿಕೊಂಡಿತು. ಮಣಿಪಾಲ್ ಆಸ್ಪತ್ರೆಯಲ್ಲಿ ಸೋಂಕಿಗೆ ಚಿಕಿತ್ಸೆ ನೀಡಲಾಯಿತಾದರೂ, ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿರಲಿಲ್ಲ.

ಶ್ವಾಸಕೋಶದ ಸೋಂಕು ಗಂಭೀರ ಸ್ವರೂಪಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಎರಡು ದಿನಗಳ ಹಿಂದೆ ಅವರನ್ನು ಮಣಿಪಾಲ್ ಆಸ್ಪತ್ರೆಯಿಂದ ಎಲೆಕ್ಟ್ರಾನಿಕ್ ಸಿಟಿಯ ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.

Leave a Reply

Your email address will not be published. Required fields are marked *

error: Content is protected !!