ಬಂಟ್ವಾಳ: ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮೊಡಂಕಾಪು ಇನ್ಫಾಂಟ್ ಜೀಸಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ಸಲ್ಮಾನುಲ್ ಫಾರಿಶ್ ಅವರು 564 ಅಂಕಗಳನ್ನು ಪಡೆದು ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಇವರು ಬಂಟ್ವಾಳ ತಾಲೂಕಿನ ಕಾವಳ ಪಡೂರು ನಿವಾಸಿ ಮುಹಮ್ಮದ್ ಆಲಿ, ಝೋಹರ ದಂಪತಿಯ ಪುತ್ರ.