April 27, 2026

ಬಿ.ಸಿ ರೋಡ್: ರೈಲಿನಲ್ಲಿ ಗರ್ಭಿಣಿ ಮಹಿಳೆಗೆ ಹೆರಿಗೆ ನಡೆಸಿದ ಪ್ರಯಾಣಿಕ ಮಹಿಳೆಯರು: ಮಂಗಳೂರು-ಬೆಂಗಳೂರು ನಡುವೆ ಸಂಚರಿಸುತ್ತಿದ್ದ ರೈಲಿನಲ್ಲಿ ನಡೆದ ಘಟನೆ: ವ್ಯಾಪಕ ಪ್ರಶಂಸೆ

0
n710055660177725845814387c6bd30ce2562318c178ed678426adfb3cfd978d1a2777eacf84bc553e8b422.jpg

ಮಂಗಳೂರು: ಕಾರವಾರ – ಮಂಗಳೂರು – ಬೆಂಗಳೂರು ಮಧ್ಯೆ ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆಯೊಬ್ಬರಿಗೆ ಹೆರಿಗೆ ನೋವು ಕಾಣಿಸಿದ್ದು, ತಕ್ಷಣ ಕಾರ್ಯಪ್ರವೃತ್ತರಾದ ಅದೇ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಕೆಲವು ಮಹಿಳೆಯರು ಸೇರಿ ಸಹಜ ಹೆರಿಗೆ ಮಾಡಿಸುವ ಮೂಲಕ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ರವಿವಾರ ಮುಸ್ಸಂಜೆ ಬಂಟ್ವಾಳ ಸಮೀಪದ ಬಿ.ಸಿ.ರೋಡ್ ಬಳಿ ಈ ವಿದ್ಯಮಾನ ನಡೆದಿದೆ.

ಮಂಗಳೂರು ಜಂಕ್ಷನ್‌ನಿಂದ ಹೊರಟ ರೈಲಿನಲ್ಲಿ ಮೈಸೂರು ಮೂಲದ ತುಂಬು ಗರ್ಭಿಣಿಗೆ ಹೆರಿಗೆ ನೋವು ಕಾಣಿಸಿತ್ತು. ರೈಲು ಬಿ.ಸಿ.ರೋಡ್ ತಲುಪಿದಾಗ ಗರ್ಭಿಣಿಗೆ ತೀವ್ರ ರಕ್ತಸ್ರಾವವೂ ಆಗಿದೆ. ಈ ಹಿನ್ನೆಲೆಯಲ್ಲಿ ತಕ್ಷಣ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಯಿತು. ಹಾಗೇ ಸುಮಾರು 30 ನಿಮಿಷಗಳ ಕಾಲ ವೈದ್ಯರಿಗಾಗಿ ಕಾಯಲಾಯಿತು. ಆದರೆ ಸಕಾಲಕ್ಕೆ ವೈದ್ಯಕೀಯ ಚಿಕಿತ್ಸೆ ಲಭಿಸದ ಕಾರಣ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಕೆಲವು ಮಹಿಳೆಯರು ಕಾರ್ಯಪ್ರವೃತ್ತರಾಗಿ ಸಹಜ ಹೆರಿಗೆ ಮಾಡಿಸಿದರು ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

You may have missed

error: Content is protected !!