ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಸಿದ್ಧಕಟ್ಟೆ: ಕರ್ನಾಟಕ ಮುಸ್ಲಿಂ ಜಮಾಅತ್, ಎಸ್.ವೈ.ಎಸ್, ಎಸ್ಸೆಸ್ಸೆಫ್ ಕೆರೆಬಳಿ ಯುನಿಟ್ ವತಿಯಿಂದ ಎಸ್ಸೆಸ್ಸೆಫ್ ಸ್ಥಾಪಕ ದಿನದ ಪ್ರಯುಕ್ತ ಪ್ರತಿ ವರ್ಷ ನಡೆಸಿಕೊಂಡು ಬರುತ್ತಿರುವ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ 2026 ಎಪ್ರಿಲ್ 29 ರಂದು ಬೆಳಿಗ್ಗೆ 06 ಗಂಟೆಗೆ ಮದರಸ ಹಾಲ್ ಕೆರೆಬಳಿಯಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಫ್ ಸ್ಥಾಪಕ ದಿನದ ಅಂಗವಾಗಿ ಧ್ವಜಾರೋಹಣ, ಸಂದೇಶ ಭಾಷಣ ಹಾಗೂ ಹಜ್ಜ್ ಯಾತ್ರಿಕರಿಗೆ ಬಿಳ್ಕೊಡುಗೆ ಸಮಾರಂಭ ನಡೆಯಲಿದೆ ಹಲವಾರು ಉಲಮಾ ಉಮರಾ ನಾಯಕರು ಭಾಗವಹಿಸಲಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.





