ಬೆಂಗಳೂರು: ವರುಣನ ಆರ್ಭಟಕ್ಕೆ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿತ: ಏಳು ಮಂದಿ ಮೃತ್ಯು
ಬೆಂಗಳೂರು: ವರುಣನ ಆರ್ಭಟಕ್ಕೆ ರಾಜಧಾನಿಯಲ್ಲಿ ಭೀಕರ ದುರಂತವೊಂದು ಸಂಭವಿಸಿದ್ದು, ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಬಿದ್ದ ಪರಿಣಾಮ ಮೂವರು ಮಕ್ಕಳು ಸೇರಿದಂತೆ ಒಟ್ಟು ಏಳು ಮಂದಿ ದುರ್ಮರಣಕ್ಕೀಡಾಗಿದ್ದಾರೆ.
ನಗರದಾದ್ಯಂತ ಸಂಜೆಯಾಗುತ್ತಿದ್ದಂತೆ ಬಿರುಗಾಳಿ, ಗುಡುಗು ಸಹಿತ ಧಾರಾಕಾರವಾಗಿ ಆಲಿಕಲ್ಲು ಮಳೆ ಸುರಿದಿದೆ. ಈ ಮಧ್ಯೆ ತೀವ್ರ ಮಳೆಗೆ ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಬಿದ್ದಿದೆ.
ಮೃತಪಟ್ಟವರ ಪೈಕಿ ಕೆಲವರು ಫುಟ್‌ಪಾತ್ ಬಳಿ ತಳ್ಳುಗಾಡಿಯಲ್ಲಿ ವ್ಯಾಪಾರ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.





