May 1, 2026

ಕಾಂಗ್ರೆಸ್ ನ ಮೈಸೂರು ನಗರ ಜಿಲ್ಲಾ ಅಧ್ಯಕ್ಷ ಸಯ್ಯದ್ ಅಬ್ರಾರ್ ವಿರುದ್ಧವೂ ತಲೆದಂಡ

0
image_editor_output_image-394782765-1777612916061.jpg

ಬೆಂಗಳೂರು: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬೆನ್ನಲ್ಲೇ ರಾಜ್ಯ ಮಟ್ಟದ ನಾಯಕರ ವಿರುದ್ಧ ಪಕ್ಷ ವಿರೋಧಿ ಚಟುವಟಿಕೆಯ ಆರೋಪದ ಹಿನ್ನೆಲೆಯಲ್ಲಿ ಶಿಸ್ತು ಕ್ರಮ ಕೈಗೊಂಡಿದ್ದ ಕಾಂಗ್ರೆಸ್ ಹೈ ಕಮಾಂಡ್, ಇದೀಗ ಯುವ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷರತ್ತ ತನ್ನ ಕೆಂಗಣ್ಣು ಬೀರಿದೆ.

ಕೋಲಾರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ
ಸಯ್ಯದ್ ಅಫ್ರೀದ್ ಪಾಷಾ ವಜಾ ಬೆನ್ನಲ್ಲೇ
ಮೈಸೂರು ನಗರ ಜಿಲ್ಲಾ ಅಧ್ಯಕ್ಷ
ಸಯ್ಯದ್ ಅಬ್ರಾರ್ ವಿರುದ್ಧ ಅಖಿಲ ಭಾರತ ಯುವ ಕಾಂಗ್ರೆಸ್ ಸಮಿತಿ ಶಿಸ್ತು ಕ್ರಮ ಕೈಗೊಂಡಿದೆ.

ಕಾಂಗ್ರೆಸ್ ನಾಯಕತ್ವದ ಈ ಕ್ರಮವನ್ನು ಖಂಡಿಸಿ, ರಾಜ್ಯಾದ್ಯಂತ ಅಲ್ಪಸಂಖ್ಯಾತ ಮುಸ್ಲಿಮ್ ಸಮುದಾಯದ ಧಾರ್ಮಿಕ ಮುಖಂಡರು ಹಾಗೂ ವಿವಿಧ ಕ್ಷೇತ್ರಗಳ ಪ್ರಮುಖರು ಧ್ವನಿ ಎತ್ತುತ್ತಿರುವ ಈ ಅವಧಿಯಲ್ಲೆ ಯುವ ಕಾಂಗ್ರೆಸ್ ಜಿಲ್ಲಾ ಸಮಿತಿಯ ಅಧ್ಯಕ್ಷರ ವಿರುದ್ಧ ಕ್ರಮ ಕೈಗೊಂಡಿರುವುದು ಉರಿಯುವ ಬೆಂಕಿಗೆ ತುಪ್ಪ ಸುರಿಯುವಂತಾಗಿದೆ.

Leave a Reply

Your email address will not be published. Required fields are marked *

error: Content is protected !!