May 1, 2026

ರೌಡಿಶೀಟರ್ ಸೋಮು ಉಡುಪಿ ಜಿಲ್ಲೆಯಿಂದ ಗಡಿಪಾರು

0
image_editor_output_image328863079-1777614291129.jpg

ಕಾರ್ಕಳ: ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಕಠಿಣ ಕ್ರಮಕ್ಕೆ ಮುಂದಾಗಿರುವ ಅಧಿಕಾರಿಗಳು ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ಸೋಮನಾಥ ಅಲಿಯಾಸ್ ಸೋಮು (40) ಎಂಬಾತನ ವಿರುದ್ಧ ಗಡಿಪಾರು ಆದೇಶವನ್ನು ಹೊರಡಿಸಿದ್ದಾರೆ.

ಕಾರ್ಕಳ ತಾಲೂಕಿನ ಕಸಬ ಗ್ರಾಮದ ತೆಳ್ಳಾರು ರಸ್ತೆ ನಿವಾಸಿ ಸೋಮನಾಥ ಅಲಿಯಾಸ್ ಸೋಮು ಎಂಬಾತನನ್ನು ಪದೇ ಪದೇ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದ ಹಿನ್ನೆಲೆಯಲ್ಲಿ ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ.

ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ರೌಡಿಶೀಟರ್ ಆಗಿ ಗುರುತಿಸಿಕೊಂಡಿರುವ ಈ ಆರೋಪಿಯ ಮೇಲೆ ಈವರೆಗೆ ಒಟ್ಟು 11 ಪ್ರಕರಣಗಳು ದಾಖಲಾಗಿವೆ. ಉಡುಪಿ ಜಿಲ್ಲೆಯ ವಿಶೇಷ ಕಾರ್ಯಾಂಗ ದಂಡಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರು ಏಪ್ರಿಲ್ 30 ರಂದು ಈ ಗಡಿಪಾರು ಆದೇಶವನ್ನು ಹೊರಡಿಸಿದ್ದಾರೆ.

ಆದೇಶದ ಪ್ರಕಾರ, ಸೋಮನಾಥನನ್ನು ಶಿವಮೊಗ್ಗ ಜಿಲ್ಲೆಯ ತುಂಗಾ ನಗರ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.

Leave a Reply

Your email address will not be published. Required fields are marked *

error: Content is protected !!