June 21, 2026

ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಬಹುಮತದತ್ತ: ಕಾಂಗ್ರೆಸ್ ಪಾಳಯದಲ್ಲಿ ಸಂಭ್ರಮ

0
image_editor_output_image-1448015972-1777877784114.jpg

ತಿರುವನಂತಪುರಂ: ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಬಹುಮತವನ್ನು ದಾಟಿ ಮುನ್ನುಗ್ಗುತ್ತಿದೆ. 96 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ ಪಾಳಯದಲ್ಲಿ ಸಂಭ್ರಮ ಮನೆ ಮಾಡಿದೆ.

ರಾಜ್ಯದಲ್ಲಿ ಕಾಂಗ್ರೆಸ್ ಭರ್ಜರಿ ಮುನ್ನಡೆ ಸಾಧಿಸುತ್ತಿದ್ದಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಸೂಚನೆ ಮೇರೆಗೆ, ಕೇರಳದ ಕ್ಯಾಲಿಕಟ್‌ಗೆ ಸಚಿವ ಜಮೀ‌ರ್ ಅಹ್ಮದ್‌ ಆಗಮಿಸಿದ್ದಾರೆ. ವಿಮಾನ ನಿಲ್ದಾಣದಲ್ಲಿ ಪಕ್ಷದ ಮುಖಂಡರಿಂದ ಜಮೀರ್‌ಗೆ ಅದ್ದೂರಿ ಸ್ವಾಗತ ಸಿಕ್ಕಿದೆ.

ಏಪ್ರಿಲ್ 9 ರಂದು ಕೇರಳ ವಿಧಾನಸಭಾ ಚುನಾವಣೆ ನಡೆದಿತ್ತು. ಇಂದು ಮತ ಎಣಿಕೆ ನಡೆಯುತ್ತಿದ್ದು, ಯುಡಿಎಫ್ ಮುನ್ನಡೆ ಸಾಧಿಸಿದೆ. ಆಡಳಿತಾರೂಢ ಎಲ್‌ಡಿಎಫ್ ಹಿನ್ನಡೆ ಅನುಭವಿಸಿದೆ. ಯುಡಿಎಫ್ 96, ಎಲ್‌ಡಿಎಫ್ 42, ಎನ್‌ಡಿಎ 1 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ.

Leave a Reply

Your email address will not be published. Required fields are marked *

error: Content is protected !!