ಮೂಡುಬಿದಿರೆ: ಅಂಬ್ಯುಲೆನ್ಸ್, ಆಟೋ ರಿಕ್ಷಾ ನಡುವೆ ಅಪಘಾತ: ಆಟೋ ಚಾಲಕ ಸ್ಥಳದಲ್ಲೇ ಸಾವು
ಮೂಡುಬಿದಿರೆ: ಬನ್ನಡ್ಕ ಎಂಬಲ್ಲಿ ರವಿವಾರ ಅಂಬ್ಯುಲೆನ್ಸ್ ಮತ್ತು ಆಟೋ ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆಟೋ ಚಾಲಕ ಜಾನ್ ಕೊರೆಯಾ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬನ್ನಡ್ಕ ಮಠದಲ್ಲಿ ನಡೆಯುತ್ತಿದ್ದ ಸಮಾರಂಭವೊಂದಕ್ಕೆ ಪ್ರಯಾಣಿಕರನ್ನು ಬಿಟ್ಟು ಆಟೋ ರಿಕ್ಷಾವನ್ನು ರಿವರ್ಸ್ ತೆಗೆಯುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ಮೂಡುಬಿದಿರೆ ಕಡೆಯಿಂದ ಕಾರ್ಕಳಕ್ಕೆ ಅತೀ ವೇಗವಾಗಿ ತೆರಳುತ್ತಿದ್ದ ಅಂಬ್ಯುಲೆನ್ಸ್ ಆಟೋಗೆ ಡಿಕ್ಕಿ ಹೊಡೆದಿದೆ.
ಅಪಘಾತದ ತೀವ್ರತೆಗೆ ಆಟೋ ರಿಕ್ಷಾದ ಮೇಲ್ಭಾಗ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಅಂಬ್ಯುಲೆನ್ಸ್‌ನ ಮುಂಭಾಗ ಕೂಡ ಜಖಂಗೊಂಡಿದೆ ಎಂದು ವರದಿಯಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.





