ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ವಿಶಿಷ್ಠ ಸಾಧನೆಗೈದ ವಿಸ್ಡಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು
ಬಂಟ್ವಾಳ: ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಗಡಿಯಾರ ಎಂಬ ಪ್ರದೇಶದಲ್ಲಿರುವ ಪ್ರತಿಷ್ಠಿತ ಆಂಗ್ಲ ಮಾಧ್ಯಮ ವಿದ್ಯಾಲಯವಾಗಿರುವ ವಿಸ್ಡಮ್ ಆಂಗ್ಲ ಮಾಧ್ಯಮ ಶಾಲೆ ಬುಡೋಳಿ-ಗಡಿಯಾರ ಇಲ್ಲಿನ ವಿದ್ಯಾರ್ಥಿಗಳು ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ, ಪರೀಕ್ಷೆಗೆ ಹಾಜರಾದ ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಯಾಗುವುದರೊಂದಿಗೆ, ನೂರು ಶೇಕಡಾ ಫಲಿತಾಂಶವನ್ನು ಪಡೆದಿರುವುದಲ್ಲದೆ, ಪರೀಕ್ಷೆಗೆ ಹಾಜರಾಗಿರುವ ಒಟ್ಟು ಹದಿಮೂರು ವಿದ್ಯಾರ್ಥಿಗಳಲ್ಲಿ ಮೂವರು ವಿದ್ಯಾರ್ಥಿಗಳಾದ ಹಾಜಿರಾ ಸುಹೈದಾ 600 (96%) ಮುರ್ಷಿದಾ ಕೆ. 583 (94%) ಹಾಗೂ ಫಾತಿಮಾ ರಿಂಷಾ 563 (90%) ಅಂಕಗಳೊಂದಿಗೆ ವಿಶಿಷ್ಟ (ಡಿಸ್ಟಿಂಕ್ಷನ್) ಸ್ಥಾನವನ್ನು ಪಡೆಯುವ ಜತೆಗೆ ಉಳಿದಂತೆ ಇರುವ ಹತ್ತು ವಿದ್ಯಾರ್ಥಿಗಳಲ್ಲಿ ಏಳು ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಮತ್ತು ಮೂರು ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿ ವಿಸ್ಡಮ್ ವಿದ್ಯಾ ಸಂಸ್ಥೆಯ ಗೌರವಕ್ಕೆ ಇನ್ನಷ್ಟು ಮೆರುಗನ್ನು ನೀಡುವುದರ ಮೂಲಕ ಸಂಸ್ಥೆಗೆ KSEB ವತಿಯಿಂದ A ಗ್ರೇಡ್ ಅರ್ಹತೆಗೆ ಭಾಜನವಾಗಿಸಿದ್ದಾರೆ.





