May 5, 2026

ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಭಸ್ಮವಾದ ಕೆಎಸ್‌ಆರ್‌ಟಿಸಿ ಪಲ್ಲಕ್ಕಿ ಬಸ್‌

0
image_editor_output_image1418198916-1777968895561.jpg

ಹಾವೇರಿ: ಬೆಂಗಳೂರಿನಿಂದ ಗದಗಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಪಲ್ಲಕ್ಕಿ ಬಸ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ, ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ಜಿಲ್ಲೆಯ ರಾಣೇಬೆನ್ನೂರು ತಾಲ್ಲೂಕಿನ ದೇವರಗುಡ್ಡ ಗ್ರಾಮದ ಬಳಿಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.

ಬ್ರೇಕ್ ಲೈನ್ ದೋಷದಿಂದಾಗಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದ್ದು, ಕ್ಷಣಾರ್ಧದಲ್ಲಿ ಬಸ್‌ಗೆ ವ್ಯಾಪಿಸಿದೆ. ಈ ವೇಳೆ ಸಮಯಪ್ರಜ್ಞೆ ಮೆರೆದ ಚಾಲಕ ಪಕ್ಕೀರಪ್ಪ ಅವರು ತಕ್ಷಣವೇ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಇದರಿಂದಾಗಿ ಬಸ್ಸಿನಲ್ಲಿದ್ದ ಎಲ್ಲಾ 17 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಚಾಲಕ ಪಕ್ಕೀರಪ್ಪ ಅವರು ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದು, ನಂತರ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಘಟನಾ ಸ್ಥಳಕ್ಕೆ ರಾಣೇಬೆನ್ನೂರು ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!